ಚೀನಾ:
ಕೊರೊನಾ ವೈರಸ್ಗೆ ಬಲಿಯಾದವರ ಸಂಖ್ಯೆ 304ಕ್ಕೆ ಏರಿಕೆಯಾಗಿದ್ದು, ಸದ್ಯ ಇಲ್ಲಿನ ಗುಬೆ ಪ್ರಾಂತ್ಯದಲ್ಲಿ ಮತ್ತೆ 45 ಮಂದಿ ವೈರಸ್ ಬಾಯಿಗೆ ತುತ್ತಾಗಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳನ್ನು ಸಂಪರ್ಕಿಸಿ ಎನ್ಹೆಚ್ಕೆ ವರದಿ ಮಾಡಿದೆ.
ಡಿಸೆಂಬರ್ ತಿಂಗಳಲ್ಲಿ ಚೀನಾದ ವುಹಾನ್ ನಗರದಲ್ಲಿ ಕಾಣಿಸಿಕೊಂಡ ಈ ವೈರಸ್ ನಂತರ ಪ್ರಪಂಚದ ಹಲವು ಭಾಗಗಳಿಗೆ ಹರಡುತ್ತಿದೆ. ಚೀನಾದಲ್ಲಿ ಸದ್ಯ 14,000ಕ್ಕೂ ಹೆಚ್ಚು ಮಂದಿ ದೇಹದಲ್ಲಿ ಕೊರೊನಾ ವೈರಸ್ ಇರುವುದು ಖಚಿತವಾಗಿದೆ ಎಂದು ಹೇಳಲಾಗ್ತಿದೆ.
ನೋವೆಲ್ ಕೊರೊನಾ ವೈರಸ್ ಹರಡುವಿಕೆ ತಡೆಯುವ ಸಲುವಾಗಿ ಪ್ರವಾಸೋದ್ಯಮದ ಮೇಲೆ ನಿರ್ಬಂಧ ಹೇರಲಾಗಿದೆ. ಚೀನಾ ಮಾತ್ರವಲ್ಲದೇ ಏಷ್ಯಾದ ಖಂಡದ ಇನ್ನೂ ಏಳು ದೇಶಗಳು ಮತ್ತು ಆಸ್ಟ್ರೇಲಿಯಾ, ಫ್ರಾನ್ಸ್, ಅಮೆರಿಕ ದೇಶಗಲ್ಲೂ ಕೊರೊನಾ ವೈರಸ್ ನಿರಂತರವಾಗಿ ಹರಡುತ್ತಿದೆ. ಈ ಹಿನ್ನಲೆ ಈ ಮಹಾಮಾರಿ ವೈರಸ್ ನಿಯಂತ್ರಣಕ್ಕೆ ವೈದ್ಯರು ನಿರಂತರ ಶ್ರಮಿಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ