ಚಿತ್ರದುರ್ಗ:
ಅನಾರೋಗ್ಯದಿಂದಾಗಿ ಬೇಸತ್ತಿದ್ದ ಯುವಕನೊಬ್ಬ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಪಟ್ಟಣದ ರೈಲು ನಿಲ್ದಾಣದ ಬಳಿ ನಡೆದಿದೆ.
ಮೊಳಕಾಲ್ಮೂರು ತಾಲೂಕಿನ ಕುರಾಕಲಹಟ್ಟಿ ಗ್ರಾಮದ ಉಮೇಶ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಉಮೇಶನಿಗೆ ಆರೋಗ್ಯ ಸರಿ ಇಲ್ಲದ ಕಾರಣ ಆಗಾಗ ಚಿಕಿತ್ಸೆ ಪಡೆಯುತಿದ್ದ. ಎಷ್ಟೇ ಚಿಕಿತ್ಸೆ ಪಡೆದರೂ ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ. ಇದರಿಂದಾಗಿ ಬೇಸತ್ತಿದ್ದ ಉಮೇಶ್ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಮೊಳಕಾಲ್ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ