ಶಿರಾ :
ಶಿರಾ
ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ದಾರಿಯಲ್ಲಿ ಅಡ್ಡ ಬಂದ ಜಿಂಕೆಯ ಪ್ರಾಣ ಉಳಿಸಲು ಹೋಗಿ ಶಿಕ್ಷಕರೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಕ್ಯಾದಿಗುಂಟೆ ಬಳಿ ನಡೆದಿದೆ.
ನಾದೂರು ಗ್ರಾಮದ ರಾಜಣ್ಣ ಮೃತ ವ್ಯಕ್ತಿ. ಬರಗೂರು ರಂಗಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿರುವ ಇವರು ಭಾನುವಾರ ರಾತ್ರಿ ಮಗಳೊಂದಿಗೆ ಕಾರೇಹಳ್ಳಿ ಗ್ರಾಮದಿಂದ ನಾದೂರಿಗೆ ಹೋಗುತ್ತಿದ್ದಾಗ ಏಕಾಏಕಿ ಜಿಂಕೆಯೊಂದು ಅಡ್ಡ ಬಂದಿತ್ತು. ಜಿಂಕೆಯನ್ನು ಪಾರು ಮಾಡಲು ಹೋಗಿ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.
ಪರಿಣಾಮ ತಲೆಗೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವವಾಗಿದೆ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಇನ್ನು ರಾಜಣ್ಣ ಅವರ ಮಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿಕ್ಷಕ ರಾಜಣ್ಣ ಅವರು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕರಾಗಿದ್ದರು. ಅವರ ಸಾವಿನ ಸುದ್ದಿ ಕೇಳಿ ಹಿತೈಷಿಗಳು, ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ.
ಈ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
