ಬೆಂಗಳೂರು :
ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಅರಣ್ಯ ಇಲಾಖೆ ಪಡೆದುಕೊಂಡಿದ್ದ ಬಿ.ಸಿ.ಪಾಟೀಲ್ ಗೆ ಮಧ್ಯರಾತ್ರಿ ಖಾತೆ ಬದಲಾವಣೆ ಮಾಡಲಾಗಿದೆ.
ಹೌದು, ನಿರೀಕ್ಷಿತ ಖಾತೆ ಸಿಗದೆ ಅಸಮಾಧಾನಗೊಂಡಿದ್ದ ಅರಣ್ಯ ಸಚಿವ ಬಿ.ಸಿ.ಪಾಟೀಲ್ ಖಾತೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಕೃಷಿ ಇಲಾಖೆಯ ಜವಾಬ್ದಾರಿಯನ್ನು ನೀಡಲಾಗಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ 10 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಖಾತೆ ಹಂಚಿಕೆ ವೇಳೆ ಸಚಿವ ಬಿ.ಸಿ.ಪಾಟೀಲ್ ಗೆ ಅರಣ್ಯ ಇಲಾಖೆ ಖಾತೆ ನೀಡಲಾಗಿತ್ತು. ಇದರಿಂದ ಬಿ.ಸಿ.ಪಾಟೀಲ್ ಅಸಮಾಧಾನಗೊಂಡಿದ್ದರು.
ಈ ಹಿನ್ನೆಲೆಯಲ್ಲಿ ಕಳೆದ ತಡರಾತ್ರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದ ಬಿ.ಸಿ.ಪಾಟೀಲ್ ಅರಣ್ಯ ಖಾತೆ ಬದಲಿಗೆ ಬೇರೆ ಖಾತೆ ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು. ಪಾಟೀಲ್ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರು ಅರಣ್ಯ ಖಾತೆ ಬದಲಿಗೆ ಕೃಷಿ ಖಾತೆಯನ್ನು ಹಂಚಿಕೆ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
