ಬಾದೊಯ್:
ಯೋಗಿ ಆದಿತ್ಯನಾಥ್ ಅವರ ರಾಜ್ಯದ ಬಿಜೆಪಿ ಶಾಸಕ ರವೀಂದ್ರ ನಾಥ್ ತ್ರಿಪಾಠಿ ಹಾಗೂ ಇತರ ಆರು ಮಂದಿ ಸೇರಿ ನನ್ನನ್ನು ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪ ಮಾಡಿದ್ದಾರೆ .
13ವರ್ಷದ ಹಿಂದೆ ತನ್ನ ಪತಿ ಸಾವನ್ನಪ್ಪಿದ್ದು , 2014ರಲ್ಲಿ ರವೀಂದ್ರ ನಾಥ್ ತ್ರಿಪಾಠಿ ಅವರ ಸಂಬಂಧಿಯನ್ನು ಭೇಟಿಯಾಗಿದ್ದಾರೆ, ಮದುವೆಯ ನೆಪದಲ್ಲಿ ಹಲವು ವರ್ಷಗಳಿಂದ ಶಾಸಕರು ತಮ್ಮೊಂದಿಗೆ ದೈಹಿಕ ಸಂಬಂಧ ಹೊಂದಿರುವುದಾಗಿ ಮಹಿಳೆ ಹೇಳಿದ್ದಾರೆ ಎಂದು ಬಾದೋಯ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಬಾದನ್ ಸಿಂಗ್ ಹೇಳಿದ್ದಾರೆ.
ಶಾಸಕನ ಸಂಬಂಧಿ ತಿಂಗಳುಗಟ್ಟಲ್ಲೇ ಹೊಟೇಲ್ ವೊಂದರಲ್ಲಿ ತಮ್ಮನ್ನು ಇಟ್ಟಿದ್ದರು. 2017ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಶಾಸಕ ಹಾಗೂ ಆತನ ಕುಟುಂಬಸ್ಥರು ತಮ್ಮ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಮಹಿಳೆ ಆರೋಪಿಸಿದ್ದಾಳೆ ಎಂದು ಸಿಂಗ್ ತಿಳಸಿದ್ದಾರೆ. ಈ ಪ್ರಕರಣವನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರಿಗೆ ವರ್ಗಾಯಿಸಲಾಗಿದೆ. ವಿಚಾರಣೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
