ಮರಕ್ಕೆ ಢಿಕ್ಕಿ ಹೊಡೆದ ಜೀಪ್, ಸ್ಥಳದಲ್ಲೇ ಐವರ ದುರ್ಮರಣ!!!

ಸಿದ್ದಾಪೂರ್ :

     ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಜೀಪ್ ನಿಯಂತ್ರಣ ತಪ್ಪಿ​ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 5 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್​ನ ಸಿದ್ದಾಪೂರ್​ದಲ್ಲಿ ನಡೆದಿದೆ. 

     ಸುಮಾರು 20 ಜನ ಕಾರ್ಮಿಕರು ಜೀಪಿನಲ್ಲಿ ಇದ್ದರು ಎನ್ನಲಾಗುತ್ತಿದೆ. ಜೀಪ್ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಜೀಪ್ ​​ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

      7 ವರ್ಷದ ಮಗು ಸೇರಿ ಐವರು ಕಾರ್ಮಿಕರು ದುರ್ಮರಣವನ್ನಪ್ಪಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಸಿದ್ದಾಪೂರ್​ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link