ಬೆಂಗಳೂರು:
ಇಂದು ನಡೆಯುತ್ತಿರುವ ಕರ್ನಾಟಕ ಬಂದ್ ಹಿನ್ನೆಲೆ ಎಂದಿನಂತೆ ಬಸ್ಗಳ ಸಂಚಾರವಿದ್ದರೂ ಪ್ರಯಾಣಿಕರು ಮಾತ್ರ ಬೆರಳೆಣಿಕೆಯಷ್ಟು ಮಾತ್ರ ಕಾಣಸಿಗುತ್ತಿದ್ದಾರೆ.
ಇಂದು ಸರೋಜಿನ ಮಹಿಷಿ ವರದಿಯನ್ನ ಜಾರಿಗೆ ತರುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ಕೊಟ್ಟಿದೆ. ಈ ಹಿನ್ನೆಲೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ನಾವು ಅರ್ಧ ಗಂಟೆಯಿಂದ ಕಾದರೂ ಜನ ಬರುತ್ತಿಲ್ಲ ಬಂದ್ ಅಂತ ಜನ ಭಯಪಡುತ್ತಿದ್ದಾರೆ. ವೋಲ್ವೋದಲ್ಲಂತೂ ಎರಡು ಪ್ರಯಾಣಿಕರು ಇದ್ದರೆ ಹೆಚ್ಚು ಎಂದು ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರು ಅಳಲು ತೋಡಿಕೊಳ್ಳುತ್ತಿದ್ದಾರೆ.
ಬಂದ್ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿಯಲ್ಲಿ ಇತರ ಊರುಗಳಿಂದ ಬಂದಿರುವ ಪ್ರಯಾಣಿಕರು ಪರದಾಡುವಂತಾಗಿದೆ. ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಈಗಾಗಲೇ ಪ್ರಿಪೇಯ್ಡ್ ಕೌಂಟರ್ ಬಂದ್ ಮಾಡಲಾಗಿದೆ. ಇನ್ನು ಬಂದ್ಗೆ ಅಟೋ ಸಂಘಟನೆಗಳು, ಆಟೋ ಚಾಲಕರು ಬೆಂಬಲ ಸೂಚಿಸಿದ್ದು, ಸಾರ್ವಜನಿಕರು ಆಟೋಗಳಿಲ್ಲದೆ ಪರದಾಡುವಂತಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
