ಕೊಲ್ಕತ್ತಾ:
ಪಶ್ಚಿಮ ಬಂಗಾಳದ ಕೊಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರಲ್ಲಿ ಇಬ್ಬರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ಕೆಲ ವಿಮಾನಗಳ ಹಾರಾಟವನ್ನೂ ರದ್ದುಪಡಿಸಲಾಗಿದೆ.
ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರನ್ನು ಚಿಕಿತ್ಸೆಗೆ ಒಳಪಡಿಸಿದಾಗ ಇಬ್ಬರಲ್ಲಿ ಸಕಾರಾತ್ಮಕ ಫಲಿತಾಂಶ ಬಂದಿದೆ. ಇಬ್ಬರಿಗೂ ವೈರಸ್ ತಗುಲಿರುವುದು ಅಲ್ಲಿನ ವಿಮಾನ ನಿಲ್ದಾಣದ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಈ ಮೂಲಕ ಕೊಲ್ಕತ್ತಾದಲ್ಲಿ ಒಟ್ಟಾರೆ ಮೂರು ಪ್ರಕರಣಗಳು ಕಂಡು ಬಂದಂತಾಗಿದೆ.
ಸೋಂಕು ಪತ್ತೆಯಾದ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಿ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಅಲ್ಲದೆ, ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚೆರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರಯಾಣಿಕರು ಎಲ್ಲಿಂದ ಕೊಲ್ಕತ್ತಾಗೆ ಪ್ರಯಾಣ ಬೆಳೆಸಿದರು ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ nline news
