ತುಮಕೂರು :
ನಗರದ ಗಾರ್ಡನ್ ರಸ್ತೆಯಲ್ಲಿ ನಟರಾಜು ಎಂಬುವವರ ರೈಸ್ ಮಿಲ್ಲನ್ನು ನಝೀರ್ ಎಂಬುವವರು ಬಾಡಿಗೆಗೆ ಪಡೆದು ಖಾಲಿ ಪ್ಲಾಸ್ಟಿಕ್ ಚೀಲಗಳನ್ನು ಶೇಖರಣೆ ಮಾಡಿ ಮಾರಾಟ ಮಾಡಲು ಇಟ್ಟಿದ್ದ ಇವುಗಳಿಗೆ ಭಾನುವಾರ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಭಸ್ಮಸವಾಗಿವೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಹಾಲಿಂಗಪ್ಪ ಎಸ್.ಲಂಗೋಟಿ, ಅಗ್ನಿಶಾಮಕ ಠಾಣಾಧಿಕಾರಿ ಪಂಚಾಕ್ಷರಿ ಹಾಗೂ ಸಿಬ್ಬಂಧಿ ವರ್ಗ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದರು. ನಗರ ಠಾಣಾ ಪೊಲೀಸರು ಸ್ಥಳದಲ್ಲಿದ್ದರು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ….
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
