ಬೆಂಗಳೂರು
ಹುಬ್ಬಳ್ಳಿಯ ಕೆಎಲ್‍ಇ ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಬಿಡುಗಡೆ ಮಾಡಿರುವ ಕ್ರಮ ಸರಿಯಲ್ಲ. ಪೊಲೀಸರು ಒಂದೊಂದು ಪ್ರಕರಣದಲ್ಲಿ ಒಂದೊಂದು ರೀತಿ ತಾರತಮ್ಯ ಮಾಡುತ್ತಿದ್ದಾರೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪಾಕಿಸ್ತಾನ ಪರ ಘೋಷಣೆ ಕೂಗುವುದು ದೇಶದ್ರೋಹ, ಈ ರೀತಿ ಘೋಷಣೆ ಕೂಗಿದವರನ್ನು ಪೊಲೀಸರು ಬಿಡುಗಡೆ ಮಾಡಿದ್ದು ಸರಿಯಲ್ಲ. ಪೊಅಲೀಸರು ಇವರನ್ನು ಬಿಡುಗಡೆ ಮಾಡುತ್ತಾರೆ. ಶಾಹೀನ್ ಶಾಲೆಯಂತಹ ಪ್ರಕರಣದಲ್ಲಿ ಕೇಸ್ ಹಾಕುತ್ತಾರೆಂದು ಅವರು ಹರಿಹಾಯ್ದರು. ಈ ಪ್ರಕರಣದ ಬಗ್ಗೆ ಮತ್ತಷ್ಟು ಮಾಹಿತಿ ಪಡೆಯುತ್ತೇನೆ. ಈ ಎಲ್ಲ ವಿಚಾರಗಳನ್ನು ಸದನದಲ್ಲಿ ಪ್ರಸ್ತಾಪಿಸುವುದಾಗಿ ತಿಳಿಸಿದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








