ಬೆಂಗಳೂರು:
ವಿಧಾನಸೌಧದಲ್ಲಿ ಅಧಿವೇಶನ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಸಿಎಎ ಮತ್ತು ಕರ್ನಾಟಕ ಬಂದ್, ಕಳಸ ಬಂಡೂರಿ, ಸರೋಜಿನಿ ಮಹಿಷಿ ವರದಿ, ಆಶಾ ಕಾರ್ಯಕರ್ತರು ಅಧಿವೇಶನ ಸಮಯದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಮತ್ತು ಪೊಲೀಸ್ ಮೂಲಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ವಿಧಾನಸೌಧದ ಸುತ್ತಮುತ್ತಲಿನ 2 ಕಿ.ಮೀವರೆಗೂ ನಿಷೇಧ ಹೇರಲಾಗಿದ್ದು, ಇದರ ಜೊತೆಗೆ ನಗರ ಪೊಲೀಸರು ವಿಧಾನಸೌಧ ಸುತ್ತಮುತ್ತ ಎಂದಿನಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
