ಬೆಂಗಳೂರು :
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಹುಟ್ಟುಹಬ್ಬದ ದಿನವೇ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸದಿಂದ ಸರ್ಕಾರಿ ಬಂಗಲೆ ಕಾವೇರಿಗೆ ಅಧಿಕೃತ ಗೃಹ ಪ್ರವೇಶ ಮಾಡಿದ್ದಾರೆ.
ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರ 78 ನೇ ಹುಟ್ಟುಹಬ್ಬದ ಸಂಭ್ರಮ. ಇಂದೇ ಸಿಎಂ ತಮ್ಮ ಅದೃಷ್ಟದ ಸರ್ಕಾರಿ ಬಂಗಲೆ ಕಾವೇರಿ ನಿವಾಸಕ್ಕೆ ಯಡಿಯೂರಪ್ಪ ಅವರು ಕಾಲಿಡುತ್ತಿದ್ದಾರೆ.
ಸಿಎಂ ಜನ್ಮದಿನೋತ್ಸವದ ಪ್ರಯುಕ್ತ ಅದ್ಧೂರಿ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದ್ದು, ಸಂಜೆ ಅರಮನೆ ಮೈದಾನದ ವೈಟ್‍ಪೆಟಲ್ಸ್ ಸಭಾಂಗಣದಲ್ಲಿ ಸಂಜೆ ಸಿಎಂಗೆ ಅಭಿನಂದನಾ ಸಮಾರಂಭ ನಡೆಯಲಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬಂದು ತಿಂಗಳುಗಳೇ ಕಳೆದರೂ ಅಧಿಕೃತವಾಗಿ ಕಾವೇರಿ ನಿವಾಸಕ್ಕೆ ಸ್ಥಳಾಂತರವಾಗಿಲ್ಲ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸ ಧವಳಗಿರಿಯಲ್ಲೇ ವಾಸ್ತವ್ಯ ಹೂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








