ಪ್ಯಾರಿಸ್:
ಮಹಿಳಾ ಟೆನಿಸ್‌ನ ಧೃವತಾರೆಯಾಗಿ ಮೆರೆದ ಆಟಗಾರ್ತಿ ರಷ್ಯಾದ ಮರಿಯಾ ಶರಪೋವಾ ಅಂತಾರಾಷ್ಟ್ರೀಯ ಟೆನ್ನಿಸ್‌ಗೆ ನಿವೃತ್ತಿ ಘೋಷಿಸಿದ್ದಾರೆ.
32 ವರ್ಷದ ಮರಿಯಾ ಶರಪೋವಾ ಐದು ಗ್ರ್ಯಾಂಡ್ ಸ್ಲ್ಯಾಮ್ ಸಿಂಗಲ್ಸ್ ಪ್ರಶಸ್ತಿಗಳನ್ನು ಗೆದ್ದ ಸಾಧನೆಯನ್ನು ಮಾಡಿದ್ದಾರೆ. 28 ವರ್ಷಗಳ ಟೆನ್ನಿಸ್ ಬದುಕಿನಲ್ಲಿ 5 ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಗಳನ್ನು ಪಡೆದಿದ್ದೇನೆ. ಈಗ ಮತ್ತೊಂದು ಎತ್ತರವನ್ನು ಏರಲು ಬಯಸುತ್ತಿದ್ದೇನೆ. ವಿಭಿನ್ನ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲಿದ್ದೇನೆ ಎಮದು ಹೇಳಿ ಭವಿಷ್ಯದ ಬಗ್ಗೆ ಕುತೂಹಲಕಾರಿಯಾಗಿ ಹೇಳಿಕೆಯನ್ನು ನೀಡಿದ್ದಾರೆ ಮರಿಯಾ ಶರಪೋವಾ.
2004ರಲ್ಲಿ ವಿಂಬಲ್ಡನ್ ಗೆದ್ದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಸಾಧನೆ ಮಾಡಿದ ಶರಪೋವಾ ಅವರು ವಿಶ್ವದ ನಂ.1 ಆಟಗಾರ್ತಿಯಾಗಿ ಮೆರೆದರು. ಟೆನಿಸ್ ಕ್ರೀಡೆಗೆ ಗ್ಲಾಮರ್ ಟಚ್ ತಂದವರು. ಟೆನ್ನಿಸ್ ಮಾತ್ರವಲ್ಲ ಮಾಡೆಲಿಂಗ್ ಕ್ಷೇತ್ರದಲ್ಲೂ ಮಿಂಚಿದ್ದಾರೆ.
ಕ್ರಿಕೆಟ್ ಜಗತ್ತು ಕಂಡ ಮಹಾನ್ ಆಟಗಾರ ಸಚಿನ್ ತೆಂಡೂಲ್ಕರ್ ಯಾರೆಂದು ನನಗೆ ಗೊತ್ತಿಲ್ಲ ಎಂದ ರಷ್ಯಾದ ಜನಪ್ರಿಯ ಟೆನಿಸ್ ಆಟಗಾರ್ತಿ ಮರಿಯಾ ಶರಪೋವಾ ಹೇಳುವ ಮೂಲಕ ವಿವಾದಕ್ಕೆ ಕಾರಣರಾಗಿದ್ದರು. ಮರಿಯಾ ವಿರುದ್ಧ ಸಚಿನ್ ಅಭಿಮಾನಿಗಳು ಕಿಡಿಕಾರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ