ಗದಗ
ಕರ್ನಾಟಕದ ಮುಖ್ಯಮಂತ್ರಿ ಎಡಿಯೂರಪ್ಪ ಹುಟ್ಟುಹಬ್ಬದ ದಿನದಂದೇ ಪ್ರಧಾನಿ ಮೋದಿ ಬಂಪರ್ ಗಿಫ್ಟ್. ಉತ್ತರ ಕರ್ನಾಟಕದ ರೈತರ ಬಹುದಿನಗಳ ಹೋರಾಟಕ್ಕೆ ಸಂದ ಜಯ.
ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.ಈ ಹಿಂದೆ 13.5 ಟಿಎಂಸಿ ನೀರು ಬಳಕೆಗೆ ನ್ಯಾಯಾಲಯ ಆದೇಶ ಹೊರಡಿಸಿತ್ತು
13.5 ಟಿಎಂಸಿ ಪೈಕಿ ಮಹದಾಯಿಯಿಂದ ಮಲಪ್ರಭೆಗೆ ಕುಡಿಯುವ ನೀರಿಗಾಗಿ 4 ಟಿಎಂಸಿ ನೀರು ಹರಿಸಲು ಒಪ್ಪಿಗೆ ಸೂಚಿಸಲಾಗಿದೆ. ಬಂಡೂರಿ ಯೋಜನೆಗೆ ಒಟ್ಟು 2.18 ಟಿಎಂಸಿ, ಕಳಸಾ ಯೋಜನೆಗೆ 1.72 ಟಿಎಂಸಿ, ಜಲ ವಿದ್ಯುತ್ ಯೋಜನೆಗೆ ಒಟ್ಟು 8.02 ಟಿಎಂಸಿ ನೀರು ಮಹದಾಯಿ ನದಿ ಕಣಿವೆಯಲ್ಲಿ ಬಳಸಲು 1.5 ಟಿಎಂಸಿ ನೀರು ಹಂಚಿಕೆ ಮಾಡಲಾಗಿದೆ.
ಇದೀಗ ಕೇಂದ್ರ ಸರಕಾರ ಗೆಜೆಟ್ ಹೊರಡಿಸೋ ಮೂಲಕ ಬಹುದಿನಗಳ ಹೋರಾಟಕ್ಕೆ ಮನ್ನಣೆ ನೀಡಿದ್ದಕ್ಕಾಗಿ ಕೇಂದ್ರ ಸರ್ಕಾರದ ಕ್ರಮಕ್ಕೆ ಮಹಾದಾಯಿ ಹೋರಾಟಗಾರರಿಂದ ಅಭಿನಂದನೆ ಸಲ್ಲಿಸಿದ್ದಾರೆ.








