ಪಾವಗಡ
ಪಾವಗಡ ಪಟ್ಟಣದಲ್ಲಿ ಬೀದಿಬದಿ ವ್ಯಾಪಾರಿಗಳು ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗದಂತೆ ಫುಟ್‍ಪಾತ್‍ಗಳಲ್ಲಿ ವ್ಯಾಪಾರ ಮಾಡಿಕೊಳ್ಳಬೇಕು ಎಂದು ಬೀದಿಬದಿ ವ್ಯಾಪಾರಿಗಳ ಕ್ಷೇಮಾಭಿವೃದ್ದಿ ಸಂಘದ ನೂತನ ಅಧ್ಯಕ್ಷ ಗೇಟ್‍ಕುಮಾರ್ ತಿಳಿಸಿದರು.
ಅವರು ಪಟ್ಟಣದ ಹೊಸಬಸ್ ನಿಲ್ದಾಣದ ಬಳ ಇರುವ ಬೀದಿಬದಿ ವ್ಯಾಪಾರಿಗಳ ಕ್ಷೇಮಾಭಿವೃದ್ದಿ ಸಂಘದ ಕಚೇರಿಯಲ್ಲಿ ಶನಿವಾರ ನೂತನ ಪದಾಧಿಕಾರಿಗಳ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಬೀದಿಬದಿ ವ್ಯಾಪಾರಿಗಳ ಕ್ಷೇಮಕ್ಕಾಗಿ ಪ್ರ್ರಾಮಾಣಿಕವಾಗಿ ದುಡಿಯಲಿದ್ದು, ಸಂಘದ ಅಭಿವೃದ್ದಿಗಾಗಿ ಸದಸ್ಯತ್ವ ಪಡೆಯಬೇಕು ಎಂದು ತಿಳಿಸಿದರು.
ಚಿನ್ಮಯ ಸಂಸ್ಥೆಯ ಅಧ್ಯಕ್ಷ ಸತ್ಯಲೋಕೇಶ್ ಮಾತನಾಡಿ, ಪುರಸಭೆಯಲ್ಲಿ ಪ್ರತಿಯೊಬ್ಬ ಬೀದಿಬದಿ ವ್ಯಾಪಾರಿಯು ಗುರುತಿನ ಚೀಟಿ ಪಡೆಯಬೇಕು. ಸಂಘದ ಎಲ್ಲಾ ಸದಸ್ಯರು ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು. ಸರ್ಕಾರದಿಂದ ದೊರಕುವ ಯಾವುದೇ ಸೌಲಭ್ಯವನ್ನು ಬೇಕಾದರೂ ಪಡೆಯಬಹುದು ಎಂದು ತಿಳಿಸಿದರು.
ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂಶಶಿಕಿರಣ್ ಮಾತನಾಡಿ, ತಮ್ಮ ಸಂಘದ ವತಿಯಿಂದ ಬೀದಿಬದಿ ವ್ಯಾಪಾರಿಗಳ ಆರೋಗ್ಯವನ್ನ ಬಲಪಡಿಸುವ ಉದ್ದೇಶದಿಂದ ಕಾಲಕಾಲಕ್ಕೆ ಆರೋಗ್ಯ ಶಿಬಿರಗಳನ್ನು ಏರ್ಪಡಿಸುವುದಾಗಿ ತಿಳಿಸಿದರು .ಪಾವಗಡ ತಾಲ್ಲೂಕು ಬರಪೀಡಿತ ಪ್ರದೇಶವಾಗಿದ್ದು, ಮುಂದಿನ ಸಾಲಿನಿಂದ ಪುರಸಭೆಯ ವತಿಯಿಂದ ಬೀದಿಬದಿ ವ್ಯಾಪಾರಿಗಳಿಂದ ಸುಂಕ ವಸೂಲಿಗಾಗಿ ಕರೆಯುವ ಟೆಂಡರ್‍ನ್ನು ರದ್ದು ಪಡಿಸುವಂತೆ ಪುರಸಭೆಯನ್ನು ಒತ್ತಾಯಿಸಲು ಸಭೆಯಲ್ಲಿ ತಿರ್ಮಾನಿಸಲಾಯಿತು.
ಸಂಘದ ನೂತನ ಗೌರವಾಧ್ಯಕ್ಷ ಹನುಮಂತರಾಯಪ್ಪ, ಉಪಾಧ್ಯಕ್ಷ ಮಹೇಶ್, ಮಹಿಳಾ ಅಧ್ಯಕ್ಷರಾದ ಶಶಿಕಲಾ, ಉಪಾಧ್ಯಕ್ಷರಾದ ಗಂಗಮ್ಮ, ಪ್ರಧಾನ ಕಾರ್ಯದರ್ಶಿ ಸಾಧಿಕ್, ಸದಸ್ಯರಾದ ಅಂಜನ್‍ಕುಮಾರ್, ನಾಗರಾಜು, ಅನಿಲ್, ಬಟ್ಟೆಲೋಕೇಶ್, ಗಂಗಾಧರಪ್ಪ, ಬುಡಾನ್‍ಸಾಬ್, ವಾಚ್ ವೆಂಕಟೇಶ್ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
