ನವದೆಹಲಿ
ಕಳೆದ ವರ್ಷ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆಯ (CAA) ವಿರುದ್ಧ ದೇಶಾದ್ಯಂತ ಸಾಕಷ್ಟು ಟೀಕೆಗಳು, ಪ್ರತಿಭಟನೆಗಳು ನಡೆಯುತ್ತಿವೆ ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತೊಂದು ವಿವಾದಾತ್ಮಕ ಕಾಯ್ದೆ ಜಾರಿಗೊಳಿಸಲು ಅಣಿಯಾಗುತ್ತಿದೆಯೇ ಎಂಬ ಅನುಮಾನ ದೇಶವಾಸಿಗಳನ್ನು ಕಾಡುತ್ತಿದೆ.
‘ಪೌರತ್ವ ತಿದ್ದುಪಡಿ ಕಾಯ್ದೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಜನಸಂಖ್ಯಾ ನಿಯಂತ್ರಣಾ ಕಾಯ್ದೆಯನ್ನು ಜಾರಿಗೊಳಿಸಲು ಸಿದ್ದರಾಗಿದ್ದಾರೆ’ ಎಂದು ಕೇಂದ್ರದ ಗ್ರಾಮೀಣಾಭಿವೃದ್ಧಿ ಇಲಾಖೆಯ ರಾಜ್ಯ ಸಚಿವೆ ಸಾದ್ವಿ ನಿರಂಜನಾ ಜ್ಯೋತಿ ಹೇಳಿದ್ದಾರೆ.
ಮಥುರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಜನಸಂಖ್ಯೆ ನಿಯಂತ್ರಣದ ಹೊಸ ಕಾಯ್ದೆ ತರುವ ಬಗ್ಗೆ ಅವರು ಪ್ರಸ್ತಾಪ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ