ಕಲಬುರಗಿ:
ಟೈರ್ ಸ್ಫೋಟಗೊಂಡು ಕ್ರೂಸರ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಂಚೋಳಿ ತಾಲೂಕಿನ ಯಲಮಾಮಡಿ ಸಮೀಪ ಸೋಮವಾರ ನಡೆದಿದೆ.
ಯಲಮಾಮಡಿ ಪುನರ್ವಸತಿ ಕೇಂದ್ರ-2ರ ನಿವಾಸಿ ಶಾಮರಾವ್(65) ಹಾಗೂ ಯಲಮಾಮಡಿ ತಾಂಡಾ ನಿವಾಸಿ ಮೋತಿಬಾಯಿ(55) ಮೃತ ದುರ್ದೈವಿಗಳು.
ಘಟನೆಯಲ್ಲಿ 10 ಜನರಿಗೆ ಗಂಭೀರ ಗಾಯಗಳಾಗಿದ್ದು, ಕಲಬುರಗಿ ಹಾಗೂ ಬೀದರ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
