ಕೊಪ್ಪಳ:
ತೋಳ ದಾಳಿ ಮಾಡಿ 10 ಮಂದಿಗೆ ಹಿಗ್ಗಾ ಮುಗ್ಗ ಕಚ್ಚಿ ಗಾಯ ಗೋಳಿಸಿದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಟೆಂಗುಂಟಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಟೆಂಗುಂಟಿ ಗ್ರಾಮದಲ್ಲಿ ತೋಳ ದಾಳಿ ಮಾಡಿದ್ದು ಮಹಿಳೆಯರು ವೃದ್ದರು ಸೇರಿದಂತೆ ಹತ್ತು ಜನರನ್ನು ಮುಖ. ತಲೆ. ಕಾಲಿಗೆ ಕಚ್ಚಿ ಗಾಯಗೊಳಿಸಿದೆ.
ರೊಚ್ಚಿಗೆದ್ದ ಗ್ರಾಮಸ್ಥರು ತೋಳವನ್ನು ಅಟ್ಟಾಡಿಸಿಕೊಂಡು ಹೊಡೆದು ಸಾಯಿಸಿದ್ದಾರೆ. ಗಾಯಗೊಂಡ ವರನ್ನು ಕುಷ್ಟಗಿ ತಾಲೂಕಾ ಆಸ್ಪತ್ರೆಯ ಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ