ನವದೆಹಲಿ:
ಕೊರೋನಾ ವೈರಸ್ ಹರಡದಂತೆ ತಡೆಯಲು ಮುಂಜಾಗೃತಾ ಕ್ರಮವಾಗಿ ಶುಕ್ರವಾರ ಐಪಿಎಲ್ ಪಂದ್ಯಾವಳಿಯನ್ನು ಮುಂದೂಡಲಾಗಿದ್ದು, ಇದೇ ರೀತಿ ವಿಶ್ವದಾದ್ಯಂತ ವಿವಿಧ ಕ್ರೀಡಾಕೂಟಗಳನ್ನು ಮುಂದೂಡಲಾಗಿದೆ ಮತ್ತು ಕೆಲ ಕ್ರೀಡಾ ಚಟುವಟಿಕೆಗಳನ್ನು ರದ್ದು ಪಡಿಸಲಾಗಿದೆ.
ಈಗ ಮುಂದೂಡಿಕೆಯಾಗಿರುವ ವಿಶ್ವದ ಐಶಾರಾಮಿ ಟಿ20 ಕ್ರಿಕೆಟ್ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ ಏಪ್ರಿಲ್ 15ರ ನಂತರ ರದ್ದಾಗುವ ಆತಂಕದಲ್ಲಿದೆ. ಆದರೆ ಐಪಿಎಲ್ ರದ್ದು ಮಾಡುವುದಕ್ಕಿಂತಲೂ ಮುಚ್ಚಿದ ಕ್ರೀಡಾಂಗಣದಲ್ಲಿ ಆಯೋಜಿಸುವುದೇ ವಾಸಿ ಎಂದು ಹೇಳಲಾಗುತ್ತಿದೆ. ಈಗಾಗಗಲೇ ಹಲವು ಕ್ರೀಡಾ ಕೂಟಗಳನ್ನು ಮುಚ್ಚಿದ ಕ್ರೀಡಾಂಗಣಗಳಲ್ಲಿ ನಡೆಸಲಾಗುತ್ತಿದ್ದು, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವೆ ಶುಕ್ರವಾರ ನಡೆದ ಏಕದಿನ ಸರಣಿಯ ಮೊದಲ ಪಂದ್ಯವನ್ನೂ ಖಾಲಿ ಕ್ರೀಡಾಂಗಣದಲ್ಲಿ ಆಯೋಜಿಸಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








