ಮುಂಬೈ :
ಭಾರತದಲ್ಲಿ ಕರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಮಂಗಳವಾರ ಮೂರಕ್ಕೆ ಏರಿಕೆಯಾಗಿದ್ದು, ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ 64 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಮುಂಬೈನ ಕಸ್ತೂರಿಬಾ ಆಸ್ಪತ್ರೆಯಲ್ಲಿ ಈ ವ್ಯಕ್ತಿಯನ್ನು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಈ ಮೂಲಕ ಭಾರತದಲ್ಲಿ ಕೊರೊನಾ ವೈರಸ್ ಗೆ ಮೂರನೇ ಬಲಿಯಾಗಿದೆ.
ಕರ್ನಾಟಕದ ಕಲಬುರಗಿಯಲ್ಲಿ 75 ವರ್ಷದ ವೃದ್ಧ ಕೊರೊನಾದಿಂದ ಸಾವನ್ನಪ್ಪಿದ್ದ ಮೊದಲ ವ್ಯಕ್ತಿಯಾದರೆ, ದೆಹಲಿಯಲ್ಲಿ 60 ವರ್ಷ ಮೇಲ್ಪಟ್ಟ ಮಹಿಳೆಯೊಬ್ಬರು ಮೃತಪಟ್ಟದ್ದು ಎರಡನೇ ದುರಂತವಾಗಿತ್ತು. ಇದೀಗ ಮಹಾರಾಷ್ಟ್ರದ ಮುಂಬೈನಲ್ಲಿರುವ ಕಸ್ತೂರ್ಬಾ ಹಾಸ್ಪಿಟಲ್ನಲ್ಲಿ ಕೊರೊನಾ ವೈರಸ್ 3 ನೇ ಬಲಿ ಪಡೆದಿರುವುದು ಆತಂಕಕ್ಕೆ ಕಾರಣವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ