ಬೆಂಗಳೂರು :
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ಇನ್ನೂ ಒಂದು ವಾರ ಮುಂದುವರಿಕೆ ಮಾಡಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನೂ ಒಂದು ವಾರ ಕರ್ನಾಟಕ ಬಂದ್ ಮುಂದುವರೆಸುವ ಕುರಿತು ಮಧ್ಯಾಹ್ನದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಪ್ರಸ್ತುತ ಮಾರ್ಚ್ 14 ರಿಂದ 21ರ ತನಕ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಚಿತ್ರಮಂದಿರ, ಪಬ್, ಮಾಲ್ ಬಂದ್ ಮಾಡುವಂತೆ ಆದೇಶ ನೀಡಲಾಗಿದೆ. ಕ್ರೀಡಾ ಚಟುವಟಿಕೆ, ಸೆಮಿನಾರ್, ವಿವಾಹ ಕಾರ್ಯಕ್ರಮ ನಡೆಸದಂತೆ ಸೂಚಿಸಲಾಗಿದೆ. ಇದನ್ನು ಇನ್ನೂ ಒಂದು ವಾರಗಳ ಕಾಲ ವಿಸ್ತರಣೆ ಮಾಡುವ ಸಾಧ್ಯತೆ ಇದೆ.
ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರವು ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಪ್ರಸ್ತುತ ಸೋಂಕು ನಿಯಂತ್ರಣಕ್ಕೆ ಬಾರದೆ ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬಂದ್ ಗಡುವು ವಿಸ್ತರಿಸಲಾಗಿದೆ. ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಬಳಿಕ ಈ ಕುರಿತು ಅಧಿಕೃತ ಘೋಷಣೆ ಆಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ