ಚಾಮರಾಜನಗರ:
ನೆರೆಯ ಮೈಸೂರು ಜಿಲ್ಲೆಯಲ್ಲಿ ವ್ಯಾಪಿಸಿರುವ ಹಕ್ಕಿಜ್ವರ ಹರಡುವುದನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಕೋಳಿ ಮಾರಾಟವನ್ನು ಜಿಲ್ಲಾಧಿಕಾರಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಮೈಸೂರು ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆಗೆ ಹಕ್ಕಿಜ್ವರ ಹರಡುವುದನ್ನು ತಡೆಗಟ್ಟುವ ಪ್ರಯತ್ನವಾಗಿ ಮುಂದಿನ ಆದೇಶ ಹೊರಡಿಸುವವರೆಗೆ ಕೋಳಿ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಲಾಗಿದೆ.’ ಬುಧವಾರ ಇಲ್ಲಿ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆ ತಿಳಿಸಿದೆ.ಕೋಳಿ ಸಾಗಾಣಿಕೆಯನ್ನು ಪರಿಶೀಲಿಸಲು ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ಗಳಲ್ಲಿ ವಿಶೇಷ ತಂಡವನ್ನು ಸ್ಥಾಪಿಸಲು ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ದಿನದ 24 ತಾಸು ಔಷಧಾಲಯವನ್ನು ತೆರೆಯಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ.