ನವದೆಹಲಿ :
ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಐಸಿಎಸ್‌ಇಯ 10, 12ನೇ ತರಗತಿಯ ಪರೀಕ್ಷೆಗಳನ್ನು ಮಾರ್ಚ್ 31ಕ್ಕೆ ಮುಂದೂಡಿಕೆ ಮಾಡಲಾಗಿದೆ.
ದೇಶದೆಲ್ಲೆಡೆ ಕೊರೊನಾ ವೈರಸ್ ಸೋಂಕಿನ ಭೀತಿ ಎದುರಾಗಿದೆ. ಸಿಬಿಎಸ್‌ಇ ಬೋರ್ಡ್ ಇಂದಿನಿಂದ ಆರಂಭಗೊಳ್ಳಬೇಕಿದ್ದಂತ 10, 12ನೇ ತರಗತಿಯ ಪರೀಕ್ಷೆಗಳನ್ನು ಮಾರ್ಚ್ 31ರ ನಂತ್ರ ನಡೆಸಲಾಗುತ್ತದೆ ಎಂಬುದಾಗಿ ಮುಂದೂಡಿಕೆ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಐಸಿಎಸ್‌ಇಯ 10, 12ನೇ ತರಗತಿಯ ಪರೀಕ್ಷೆಗಳನ್ನು ಮಾರ್ಚ್ 31ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಈ ಕುರಿತಂತೆ ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸೆರ್ಟಿಫಿಕೇಟ್ ಎಕ್ಸಾಮಿನೇಷನ್(ಸಿಐಎಸ್ಸಿಇ) ಚೀಫ್ ಎಕ್ಸಿಕ್ಯೂಟಿವ್ ಜೆರ್ರಿ ಅರತೋನ್, ಐಸಿಎಸ್‌ಇ ಪರೀಕ್ಷೆಗಳನ್ನು ಮಾರ್ಚ್ 31ಕ್ಕೆ ಮುಂದೂಡಿಕೆ ಮಾಡಲಾಗಿದೆ. 10, 12ನೇ ತರಗತಿಯ ಪರೀಕ್ಷೆಗಳನ್ನು ಮಾರ್ಚ್ 31ಕ್ಕೆ ಮುಂದೂಡಿಕೆ ಮಾಡಲಾಗಿದ್ದು, ಮುಂದಿನ ಪರೀಕ್ಷಾ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ