ನವದೆಹಲಿ :
ನಾಳೆ ದೇಶಾದ್ಯಂತ ಜನತಾ ಕರ್ಪ್ಯೂಗೆ ಪ್ರಧಾನಿ ಮೋದಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆ ಒಪಿಡಿಗಳನ್ನು ಬಂದ್ ಮಾಡಲಾಗುವುದು.
ದೇಶದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಜನತಾ ಕರ್ಫ್ಯೂಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಹೀಗಾಗಿ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡುವಂತೆ ಐಎಂಎ ಸೂಚನೆ ನೀಡಿದೆ. ತುರ್ತು ಚಿಕಿತ್ಸೆ ಮಾತ್ರ ನೀಡಲಾಗುವುದು ಎನ್ನಲಾಗಿದೆ.
ಹೊರರೋಗಿಗಳ ವಿಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬಂದು ಸೋಂಕು ತಗುಲುವ ಸಾಧ್ಯತೆ ಹಿನ್ನಲೆಯಲ್ಲಿ ಅಗತ್ಯ ಇರುವವರಿಗೆ ತುರ್ತು ಚಿಕಿತ್ಸೆ ನೀಡಲಾಗುವುದು ಎಂದು ಹೇಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
