ಬೆಂಗಳೂರು
ಹುಬ್ಬಳ್ಳಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ನಡುವೆ ಸಂಪರ್ಕ ಕೊಂಡಿಯಾಗಿರುವ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗಕ್ಕೆ ಮುಖ್ಯಮಂತ್ರಿ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ತಿಳಿಸಿದ್ದಾರೆ.
ನಾನು ರಾಜ್ಯದ ಅಭಿವೃದ್ಧಿಗೆ ವಿರೋಧಿಯಲ್ಲ ಆದರೆ ಪರ್ಯಾಯ ವ್ಯವಸ್ಥೆ ಇದ್ದರು ಪರಿಸರಕ್ಕೆ ಹಾನಿಕಾರಕವಾದ ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರ ಸಜ್ಜಾಗಿರುವುದನ್ನು ನಾನು ಬೆಂಬಲಿಸುವುದಿಲ್ಲ ಮತ್ತು ನನ್ನ ಆತ್ಮಸಾಕ್ಷಿ ಒಪ್ಪುವುದಿಲ್ಲಾ.