ಬೆಂಗಳೂರು :
ಕರ್ನಾಟಕ ವಿಧಾನಸಭೆಯ ಉಪಾಧ್ಯಕ್ಷರಾಗಿ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ ಆನಂದ್ ಮಾಮನಿ ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
24 ನೇ ಡೆಪ್ಯುಟಿ ಸ್ಪೀಕರ್ ಆಗಿ ಬಿಜೆಪಿ ಶಾಸಕ ಆನಂದ್ ಮಾಮನಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸ್ಪೀಕರ್ ಕಾಗೇರಿ ಅವರು ಇಂದಿನ ಅಧಿವೇಶನದಲ್ಲಿ ಘೋಷಣೆ ಮಾಡಿದ್ದಾರೆ.
ಇಂದು ವಿಧಾನಸಭೆ ಅಧಿವೇಶನದಲ್ಲಿ ಪ್ರತಿಪಕ್ಷದ ಶಾಸಕರ ಅನುಪಸ್ಥಿತಿಯಲ್ಲೇ ವಿಧಾನಸಭೆ ಉಪಸಭಾಧ್ಯಕ್ಷರಾಗಿ ಆನಂದ್ ಮಾಮನಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿ ಸ್ಪೀಕರ್ ಕಾಗೇರಿ ಘೋಷಣೆ ಮಾಡಿದ್ದಾರೆ.
ನಂದ್ ಮಾಮನಿಗೆ ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನ ನೀಡುವಂತೆ ಬೃಹತ್ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಮತ್ತಿತರರು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಅಂತಿಮವಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬೇಡಿಕೆಗೆ ಅಸ್ತು ಎಂದಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ