ಕೊರೋನಾ ವೈರಸ್ ಬಗ್ಗೆ ಫೇಸ್‌ಬುಕ್‌ನಲ್ಲಿ ಫೇಕ್‌ ಸುದ್ದಿ ಹರಿಬಿಟ್ಟವನ ವಿರುದ್ಧ ಕೇಸ್‌!…

ಬೆಳಗಾವಿ:

    ಕೊರೋನಾ ಸೊಂಕಿತ ಐವರು ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಸುಳ್ಳು ಸುದ್ದಿ ಹರಿಬಿಟ್ಟ ವ್ಯಕ್ತಿಯ ವಿರುದ್ಧ ‌ಜಿಲ್ಲೆಯ ಐಗಳಿ ಠಾಣೆಯ ಪೊಲೀಸರು ‌ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ‌ಗೌಡೇಶ ಬಿರಾದಾರ ತುಂಗಳ ಎಂಬಾತನ ಹೆಸರಿನ ಫೇಸ್‌ಬುಕ್‌ ಅಕೌಂಟ್ ನಿಂದ ಮಾ.24 ರಂದು ಗೋವಾಗೆ ದುಡಿಯಲು ಹೋದ ಐಗಳಿ ಗ್ರಾಮದ 5 ಜನರು ಕೊರೋನಾ ಸೊಂಕಿಗೆ ಬಲಿ, ಇವತ್ತು ಗೋವಾದಿಂದ ಮರಳಿ ಬರುವಾಗ ಅಥಣಿಯಲ್ಲಿ ವಶಕ್ಕೆ ಪಡೆದುಕೊಂಡ ಎಂದು ಬರೆದು ಸುಳ್ಳು ಸುದ್ದಿಯನ್ನು ಪೋಸ್ಟ್‌ ಮಾಡಿದ್ದ.

   ಕೊರೋನಾ ಸೊಂಕಿನ ಬಗ್ಗೆ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿ ನೆಮ್ಮದಿ ಹಾಳು ಮಾಡಿದ ಅಪರಾಧದ ಮೇಲೆ ‌ಐಗಳಿ‌ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link