ಭಟ್ಕಳ:
ಕೊರೊನಾ ವಾರ್ಡ್ನಲ್ಲಿ ಕಾರ್ಯನಿರ್ವಹಿಸಿದ್ದ ವೈದ್ಯರಿಬ್ಬರಿಗೆ ಜ್ವರದ ಲಕ್ಷಣ ಕಂಡುಬಂದಿದ್ದು, ಹಾಗಾಗಿ ಮುಂಜಾಗ್ರತೆ ಕ್ರಮವಾಗಿ ಗಂಟಲಿನ ದ್ರವವನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇಬ್ಬರಿಗೆ ಕೊರೊನಾ ಸೋಂಕು ಇಲ್ಲ ಎಂದು ಬಂದಿದೆ.
ಸದ್ಯ ಇಬ್ಬರೂ ಕೊರೊನಾ ಪೀಡಿತರಿಗೆ ಚಿಕಿತ್ಸೆ ಮುಂದುವರಿದಿದ್ದು, ಇವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ 40 ಮಂದಿಯ ಗಂಟಲಿನ ದ್ರವವನ್ನು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿರುವುದಾಗಿ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.
ತಾಲೂಕಿನಲ್ಲಿ ಎಲ್ಲಾ ಅಂಗಡಿಗಳನ್ನು ಮುಚ್ಚಿಸಲಾಗುವುದು. ಯಾರೂ ಕೂಡ ಮನೆಯಿಂದ ಹೊರ ಬರಬಾರದು ಎಂದು ಈ ಕ್ರಮ ಕೈಗೊಳ್ಳಲಾಗುತ್ತಿದೆ. ತಾಲೂಕಾಡಳಿತದಿಂದ ಮನೆಮನೆಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲಾಗುವುದು ಎಂದು ಉಪವಿಭಾಗಾಧಿಕಾರಿ ಭರತ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ