ಹಳ್ಳಿಗಳಿಗೆ ಸೋಂಕು ಹರಡದಂತೆ ನೋಡಿಕೊಳ್ಳಿ: ಸಿದ್ದರಾಮಯ್ಯ

ಬೆಂಗಳೂರು

     ವಿದೇಶದಿಂದ ಬಂದವರ ಆರೋಗ್ಯ ತಪಾಸಣೆ ಸರಿಯಾಗಿ ಆಗುತ್ತಿಲ್ಲ. ಸರ್ಕಾರದ ಮಾಹಿತಿಯೂ ಅಸ್ಪಷ್ಟವಾಗಿದೆ. ಸರ್ಕಾರವೇ ಹೇಳಿದಂತೆ 23 ಸಾವಿರ ಮಂದಿ ಪೈಕಿ 4.500 ಮಂದಿಯನ್ನು ಕೂಡಲೇ ಪತ್ತೆ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

     ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ತಪ್ಪಿನಿಂದ ಯಾವ ನ್ಯೂನತೆ ಆಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ಮೂರನೇ ಹಂತಕ್ಕೆ ಕರ್ನಾಟಕ ಇನ್ನೂ ಹೋಗಿಲ್ಲ ಎಂದು ಸಚಿವರು ಹೇಳಿದ್ದಾರೆ. ನಂಜನಗೂಡಿನಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದೆ. ಆದರೆ. ಆತನಿಗೆ ವಿದೇಶದಿಂದ ಬಂದವರ ಸಂಪರ್ಕ ಇರಲಿಲ್ಲ. ಆದರೂ ಕರೋನ ಹೇಗೆ ಬಂತು ಎಂಬುದನ್ನು ಪತ್ತೆ ಮಾಡಬೇಕು. ಶಿರಾದಲ್ಲಿ ಯೂ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ. ಈ ಇಬ್ಬರಿಗೂ ಸೋಂಕು ಯಾವ ಹಂತದಲ್ಲಿತ್ತು ಎಂಬುನ್ನು ಹೇಳಬೇಕು. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಸಲಹೆ ನೀಡಿದ್ದಾರೆ.

    ಹಳ್ಳಿಗಳಿಗೆ ಸೋಂಕು ಹರಡದಂತೆ ನೋಡಿಕೊಳ್ಳಬೇಕು. ಮಾಸ್ಕ್, ಸ್ಯಾನಿಟೈಸರ್, ಪಿಪಿಇ, ಟೆಸ್ಟಿಂಗ್ ಕಿಟ್ ಗಳು ಸಾಕಷ್ಟು ಪ್ರಮಾಣದಲ್ಲೂ ಇಲ್ಲ. ಈಗ ವಿತರಿಸಿರುವ ಮಾಸ್ಕ್,ಗೌನ್‌ಗಳು ಗುಣಮಟ್ಟದ್ದಾಗಿಲ್ಲ ಎಂದು ಆರೋಪಿಸಿದರು.ಸೋಂಕು ವೇಗವಾಗಿ ಹರಡುವ ಸಾಧ್ಯತೆ ಇದೆ. ಹೀಗಾಗಿ ಮಾಸ್ಕ್ ತಯಾರಿಕೆ ಕೆಲಸ ಆಗಬೇಕು.ಮಾಸ್ಕ್‌ತಯಾರಿಕೆ‌ ಕೆಲಸವನ್ನು ಗಾರ್ಮೆಂಟ್ಸ್ ಫ್ಯಾಕ್ಟರಿಗಳಿಗೆ ವಹಿಸಬೇಕು. ಮೂರನೇ ಹಂತಕ್ಕೆ ಹೋಗುವುದನ್ನು ತಡೆಯುವ, ಅದನ್ನು ನಿಭಾಯಿಸುವ ಕೆಲಸ ಸಮರೋಪಾದಿಯಲ್ಲಿ ಆಗಬೇಕು.ಸಾಮಾಜಿಕ ಅಂತರ ಕಾಪಾಡುವುದರ ಜೊತೆಗೆ ರೈತರ ಹಿತವೂ ಮುಖ್ಯ. ಏಪ್ರಿಲ್, ಮೇ ತಿಂಗಳಲ್ಲಿ ಮುಂಗಾರು ಪೂರ್ವ ಬಿತ್ತನೆ ಆರಂಭವಾಗಲಿದ್ದು ಕೆಲವು ಜಿಲ್ಲೆಗಳಲ್ಲಿ. ಕೃಷಿ ಚಟುವಟಿಕೆ ನಿಲ್ಲದಂತೆ ನೋಡಿಕೊಳ್ಳಬೇಕು. ಬಿತ್ತನೆಗೆ ಮುಂದಾಗುವವರಿಗೆ ಬೀಜ, ಗೊಬ್ಬರ ಸಿಗುವಂತಾಗಬೇಕು ಎಂದರು.

     ವಲಸಿಗರು ಹೆಚ್ಚಾಗಿರುವ ಬೆಂಗಳೂರು ನಗರದಲ್ಲಿ ಹೊರ ರಾಜ್ಯಗಳಿಂದ ಬಂದವರು ಸ್ವಂತ ಊರುಗಳಿಗೆ ಹೋಗಲು ಪರದಾಡುತ್ತಿದ್ದಾರೆ. ಕನ್ನಡಿಗರನ್ನು ಹೊರ ರಾಜ್ಯಗಳಿಂದ ಕರೆ ತರಬೇಕು. ಈಗಾಗಲೇ ಸಾಕಷ್ಟು ಮಂದಿ ಗಡಿ ತಲುಪಿದ್ದಾರೆ. ಅವರಿಗೆ ರಕ್ಷಣೆ ನೀಡುವುದು ಅವಶ್ಯಕ. ಅವರ ಆರೋಗ್ಯ ತಪಾಸಣೆ ಮಾಡಿ ಊರುಗಳಿಗೆ ಕಳುಹಿಸುವುದು ಸೂಕ್ತ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link