ಮಹಾರಾಷ್ಟ್ರ:
ಸಾಂಗ್ಲಿ ಜಿಲ್ಲೆಯ ದೃಢಪಟ್ಟಿರುವ ಒಟ್ಟು 25 ಕೊರೊನಾ ವೈರಸ್ ಪ್ರಕರಣಗಳಲ್ಲಿ 22 ಮಂದಿ ಒಂದೇ ಕುಟುಂಬದವ ರಾಗಿದ್ದಾರೆ ಎನ್ನುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.ಈ ಕುಟುಂಬದ ನಾಲ್ಕು ಜನರು ಸೌದಿ ಅರೇಬಿಯಾದ ಹಜ್ ಯಾತ್ರೆಗೆ ಹೋಗಿ ವಾಪಸ್ ಆಗಿದ್ದರು. ಈ ನಾಲ್ವರಿಗೆ ಮಾರ್ಚ್ 19ರಂದು ಕೊರೊನಾ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಬಂದಿತ್ತು ಎನ್ನಲಾಗಿದೆ.
ಆಗ ಅವರ ಜೊತೆ ಸಂಪರ್ಕದಲ್ಲಿದ್ದ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ನಾಲ್ವರನ್ನು ಮಾರ್ಚ್ 19ರಂದು ಮೀರಜ್ನ ಸಿವಿಲ್ ಆಸ್ಪತ್ರೆಗೆ ದಾಖಲು ಮಾಡಿ ಐಸೋಲೇಷನ್ ವಾರ್ಡಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.