ಲಾಕ್‍ಡೌನ್ ಇದ್ದರೂ ಜಾಲಿ ರೈಡ್ : ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತ!!

ಬೆಂಗಳೂರು: 

     ಸ್ಯಾಂಡಲ್‍ವುಡ್ ನಟಿ ಶರ್ಮಿಳಾ ಮಾಂಡ್ರೆ ಲಾಕ್‍ಡೌನ್ ಇದ್ದರೂ ನಸುಕಿನ ಜಾವ 3 ಗಂಟೆಗೆ ಕಾರಿನಲ್ಲಿ ಜಾಲಿ ರೈಡ್ ಮಾಡಲು ಹೋಗಿ ಅಪಘಾತ ಮಾಡಿದ್ದಾರೆ.

     ಹೌದು, ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಕೆಲ ನಟ-ನಟಿಯರು ಮನೆಯಲ್ಲಿ ಇರಿ, ಯಾರೂ ಹೊರಗೆ ಬರಬೇಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ.  ಆದರೆ ಶರ್ಮಿಳಾ ಮಾಂಡ್ರೆ ಜಾಗ್ವರ್ ಕಾರಿನಲ್ಲಿ  ಅವರ ಸ್ನೇಹಿತ ಲೋಕೇಶ್ ಎಂಬಾತನ ಜೊತೆ ಶುಕ್ರವಾರ ತಡ ರಾತ್ರಿ ಜಾಲಿ ರೈಡ್ ಮಾಡಿದ್ದರು ಎನ್ನಲಾಗಿದೆ.

      ಜಾಗ್ವಾರ್ ಕಾರ್‌ನಲ್ಲಿ ವೇಗವಾಗಿ ತೆರಳುತ್ತಿದ್ದಾಗ ಸಿಲಿಕಾನ್ ಸಿಟಿಯ ವಸಂತನಗರ ಫ್ಲೈಓವರ್‌ನ ಕೆಳಗಿನ ಪಿಲ್ಲರ್‌ಗೆ ಡಿಕ್ಕಿ ಹೊಡೆದಿದ್ದು, ಕಾರಿನ ಎದುರಿನ ಭಾಗ ನಜ್ಜುಗುಜ್ಜಾಗಿದೆ.

Sharmila mandre car accident      ಸೀಟ್ ಬೆಲ್ಟ್ ಹಾಕದೆ ಇದ್ದಿದ್ದರಿಂದ ಕಾರ್‌ನ ಏರ್‌ಬ್ಯಾಗ್ ಓಪನ್ ಆಗಿರಲಿಲ್ಲ. ಇದರಿಂದ ಶರ್ಮಿಳಾ ಮಾಂಡ್ರೆ ಅವರ ಮುಖಕ್ಕೆ ಪೆಟ್ಟಾಗಿದೆ. ಶರ್ಮಿಳಾ ಅವರ ಸ್ನೇಹಿತನ ಕೈಗೆ ಗಾಯವಾಗಿದೆ ಎನ್ನಲಾಗಿದೆ. ಇನ್ನೂ ಕಾರಿನಲ್ಲಿ ಒಬ್ಬ ಸ್ನೇಹಿತನಿಗೆ ಕೈ ಫ್ರಾಕ್ಚರ್ ಆಗಿದ್ದು, ಇಬ್ಬರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.  

     ಇಂದು ನಸುಕಿನ ಜಾವ 3 ಗಂಟೆಗೆ ಈ ಘಟನೆ ನಡೆದಿದ್ದು, ಶರ್ಮಿಳಾ ಬಳಿ ಪೊಲೀಸ್ ಪಾಸ್ ಕೂಡ ಇರಲಿಲ್ಲ. ಇನ್ನು ಅಪಘಾತವಾದ ನಂತರ ನಟಿ ಶರ್ಮಿಳಾ ಮಾಂಡ್ರೆ ಜೆಪಿನಗರದಲ್ಲಿ ಅಪಘಾತವಾಗಿದೆ ಎಂದು‌ ಸುಳ್ಳು ಹೇಳಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು
ಎಂದು ಪೊಲೀಸ್ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

     ಸದ್ಯ ಇಬ್ಬರೂ ನಗರದ ಪೋರ್ಟೀಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಪ್ರಾಥಮಿಕ ತನಿಖೆಯಲ್ಲಿ ಇದು ಡ್ರಿಂಕ್ ಆ್ಯಂಡ್ ಡ್ರೈವ್ ಕೇಸ್ ಎಂದು ತಿಳಿದು ಬಂದಿದ್ದು, ಈ ಕುರಿತು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link