ದಾವಣಗೆರೆ : ವಿವಿಯಿಂದ ಜಾಗೃತ ದಳ ರಚನೆ

ದಾವಣಗೆರೆ:

    ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ಸಂಯೋಜಿತ ಕಾಲೇಜುಗಳಲ್ಲಿ ಜಾಗೃತ ದಳವನ್ನು ರಚಿಸಲಾಗಿದ್ದು, ಮನೆಯಿಂದಲೇ ಕೊರೊನಾ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ.

     ಕುಲಪತಿ ಅಧ್ಯಕ್ಷತೆಯಲ್ಲಿ ವಿಶ್ವವಿದ್ಯಾಲಯ ಜಾಗೃತ ದಳ ಹಾಗೂ ಆಯಾ ಕಾಲೇಜುಗಳ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ಕಾಲೇಜು ಈ ಜಾಗೃತ ದಳವನ್ನು ರಚಿಸಲಾಗಿದೆ.

    ವಿಶ್ವವಿದ್ಯಾಲಯ ಹಾಗೂ ಕಾಲೇಜು ವ್ಯಾಪ್ತಿಯ ಗ್ರಾಮವನ್ನು ದತ್ತು ಪಡೆದು ಅಥವಾ ಈಗಾಗಲೇ ದತ್ತು ಪಡೆದಿರುವ ಗ್ರಾಮಗಳಲ್ಲಿ  ವಿಡಿಯೊ, ವಾಟ್ಸ್‌ಆ್ಯಪ್‌ ಗ್ರೂಪ್‌ಗಳ ಮೂಲಕ ಆರೋಗ್ಯ ಜಾಗೃತಿ ಮೂಡಿಸುವುದು. ಕೊರೊನಾ ವೈರಸ್‌ ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸಲಹೆ ನೀಡುವುದು

    ದುರ್ಬಲ ವರ್ಗದವರಿಗೆ ಮಾಸ್ಕ್‌ ಹಾಗೂ ಹ್ಯಾಂಡ್‌ ಸ್ಯಾನಿಟೈಸರ್‌ ಒದಗಿಸುವುದು ಯಾವುದೇ ವ್ಯಕ್ತಿಯಲ್ಲಿ ಕೆಮ್ಮು, ನೆಗಡಿ, ಜ್ವರದಂತಹ ಲಕ್ಷಣ ಕಂಡು ಬಂದರೆ ಆರೋಗ್ಯ ಇಲಾಖೆಯ ಗಮನಕ್ಕೆ ತರುವ‌ ಕೆಲಸಗಳನ್ನು ಈ ಜಾಗೃತ ದಳ ಮಾಡಲಿದೆ ಯಲ್ಲದೆ ಹೋಂ ಕ್ವಾರಂಟೈನ್‌ನಲ್ಲಿರುವವರು 14 ದಿನಗಳ ಕಾಲ ಮನೆಯಿಂದ ಹೊರಗೆ ಬಾರದಂತೆ ನೋಡಿಕೊಳ್ಳುವಂತೆ ಮನೆಯವರಿಗೆ ಸೂಚಿಸುವ ಕೆಲಸಗಳನ್ನುಮಾಡಲಿದೆ ಎಂದು ದಾವಣಗೆರೆ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ. ಶರಣಪ್ಪ ಹಲಸೆ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link