ಬೆಂಗಳೂರು :
ಪಡಿತರ ಚೀಟಿ ಇಲ್ಲದವರಿಗೂ ಉಚಿತವಾಗಿ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಇಂದು ಉನ್ನತ ಮಟ್ಟದ ಅಧಿಕಾರಿಗಳು, ಶಾಸಕರು, ಸಚಿವರೊಂದಿಗೆ ಸಭೆ ನಡೆಸಿ ಮಾತನಾಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೊರೋನಾ ವೈರಸ್ ಸೋಂಕಿನ ತಡೆಗೆ ಲಾಕ್ ಡೌನ್ ಆಗಿರುವುದರಿಂದ ಕೂಲಿ ಕಾರ್ಮಿಕರು ಸೇರಿದಂತೆ ಬಡವರಿಗೆ ಒಂದು ಹೊತ್ತಿನ ಊಟಕ್ಕೂ ತೊಂದರೆಯಾಗಿದ್ದು ಈ ನಿಟ್ಟಿನಲ್ಲಿ ಜನರು ಹಸಿವಿನಿಂದ ಪರಿತಪಿಸಬಾರದು. ಪಡಿತರ ಚೀಟಿ ಇಲ್ಲದವರಿಗೂ ಆಹಾರ ಧಾನ್ಯಗಳನ್ನು ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಹಾಪ್ ಕಾಮ್ಸ್ ಮೂಲಕ ನಗರ ಪ್ರದೇಶಗಳಲ್ಲಿ ತರಕಾರಿ ಒದಗಿಸಲಾಗುತ್ತಿದೆ. ಜನರು ಮನೆಯಿಂದ ಹೊರಬಂದು ಲಾಕ್ ಡೌನ್ ನಿಯಮ ಉಲ್ಲಂಘಿಸಬೇಡಿ ಎಂದು ಮತ್ತೊಮ್ಮೆ ಮನವಿ ಮಾಡಿಕೊಂಡರು.
ರಾಜ್ಯದಲ್ಲಿ ಯಾವುದೇ ಸೋಂಕಿತರು ವೆಂಟಿಲೇಟರ್ ನಲ್ಲಿ ಇಲ್ಲ. ರಾಜ್ಯದಲ್ಲಿ ಟಾಸ್ಕ್ ಪೋರ್ಸ್ ತಂಡಗಳ ರಚನೆ ಮಾಡಲಾಗಿದೆ. ವಾರ್ ರೂಂ ಗಳನ್ನು ಸ್ಥಾಪನೆ ಮಾಡಿದ್ದೇವೆ. 31 ಫೀವರ್ ಕ್ಲಿನಿಕ್ ಗಳ ಸ್ಥಾಪನೆ ಮಾಡಲಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ