ಹಿರಿಯೂರು :
ರಾಜ್ಯದಲ್ಲಿ ಮಾರಕ ಕೊರೊನಾ ರೋಗ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತಲೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಮತ್ತು ಮನೆಯಿಂದ ಹೊರಗೆ ಬರದೇ ನಿಮ್ಮ ಕುಟುಂಬದ ಸುರಕ್ಷತೆಯನ್ನು ಕಾಪಾಡಿಕೊಳ್ಳಬೇಕು ಎಂಬುದಾಗಿ ನಗರಸಭೆ ಸದಸ್ಯೆ ಶಿವರಂಜಿನಿ ಕರೆ ನೀಡಿದರು.
ನಗರದಲ್ಲಿ ಮೂರನೇ ವಾರ್ಡಿನಲ್ಲಿ ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಜನನಿಬಿಡ ಪ್ರದೇಶಗಳಿಗೆ ಬ್ಲೀಚಿಂಗ್ ಪೌಡರ್ ಹಾಗೂ ಸ್ಯಾನಿಟೈಸರ್ ಸಿಂಪಡಣೆ ಮಾಡಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಇಂತಹ ತುರ್ತು ಸಂದರ್ಭದಲ್ಲಿ ಕೊರೊನಾ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತೆ ಕ್ರಮವಾಗಿ ಮನೆಮನೆಗೆ ತೆರಳಿ ವಾರ್ಡಿನ ಜನರಿಗೆ ಉಚಿತವಾಗಿ ಮಾಸ್ಕ್ ಗಳನ್ನು ವಿತರಿಸಿದರಲ್ಲದೆ ಪ್ರತಿಯೊಬ್ಬರೂ ಮಾಸ್ಕ್ ಧರಿಸುವ ಮೂಲಕ ಕೊರೊನಾ ರೋಗ ಹರಡುವುದನ್ನು ತಡೆಗಟ್ಟಬಹುದು ಎಂಬುದಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








