ಬೆಂಗಳೂರು :
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ವಿಧಿವಶರಾಗಿದ್ದಾರೆ.
ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದಾಗಿ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬುಲೆಟ್ ಪ್ರಕಾಶ್(44) ಅವರಿಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು
ಇಂದು ಸಾಯಂಕಾಲ 4:45 ನಿಮಿಷಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಬುಲೆಟ್ ಪ್ರಕಾಶ್ ವಿಧಿವಶರಾಗಿದ್ದಾರೆ ಎಂದು ಅವರ ಸಹೋದರ ಮಾಹಿತಿ ನೀಡಿದ್ದಾರೆ.
ಆಸ್ಪತ್ರೆ ಬಳಿ ಬುಲೆಟ್ ಪ್ರಕಾಶ್ ಮಗ ರಕ್ಷಕ್ ಹಾಗೂ ಅವರ ಹೆಂಡತಿ ಹಾಗೂ ಮಗಳ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಕೊರೊನಾ ಭೀತಿಯಿಂದ ಆಸ್ಪತ್ರೆ ಬಳಿ ಜನ ಸೇರದಂತೆ ಪೊಲೀಸರು ಮುಂಜಾಗ್ರತೆ ವಹಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/Bullett-prakash.gif)