ಗೃಹಸಚಿವ ಬೊಮ್ಮಾಯಿರನ್ನೇ ತಡೆದು ಯಾರು ನೀವು ಎಂದ ಪೊಲೀಸರು!!

ಬೆಂಗಳೂರು: 

      ರಾಜ್ಯದ ಗೃಹ ಸಚಿವರಿಗೆ ತಮ್ಮದೇ ಗಡಿಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ತಡೆದು ಯಾರು ನೀವು..? ಎಂದು ಕೇಳಿರುವ ಆಶ್ಚರ್ಯಕರ ಸಂಗತಿ ಬೆಳಕಿಗೆ ಬಂದಿದೆ.

      ಹೌದು, ಲಾಕ್ ಡೌನ್ ಸಮಯದಲ್ಲಿ ಪರಿಸ್ಥಿತಿ ಅರಿಯಲು, ಪಾಸ್‌ಗಳ ದುರುಪಯೋಗ ಪತ್ತೆಹಚ್ಚಲು ಬಸವರಾಜ ಬೊಮ್ಮಾಯಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ತರರಾವ್, ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಂಡ ನಗರ ಪ್ರದಕ್ಷಿಣೆ ಹಾಕುತ್ತಿದ್ದರು. ಈ ಸಮಯದಲ್ಲಿ ಕರ್ನಾಟಕ -ತಮಿಳುನಾಡು ಗಡಿ ಭಾಗ ಸೇರುವ ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ಬಂದಾಗ ಅಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಒಳಬರುವ ಹಾಗೂ ಹೊರ ಹೋಗುವ ವಾಹನಗಳನ್ನು ತಪಾಸಣೆ ಮಾಡುತ್ತಿದ್ದರು.

      ಈ ಸಮಯದಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಪೊಲೀಸರು ತಡೆದಿದ್ದಾರೆ. ಆಶ್ಚರ್ಯಕರ ಸಂಗತಿ ಎಂದರೆ, ಪೊಲೀಸರು ತಕ್ಷಣ ಬಂದು ಬಸವರಾಜ ಬೊಮ್ಮಾಯಿ ಅವರನ್ನು ಯಾರು ನೀವು, ಎಲ್ಲಿ ಹೋಗುತ್ತಿದ್ದೀರಿ ಎಂದು ಪ್ರಶ್ನೆ ಮೇಲೆ ಪ್ರಶ್ನೆಗಳನ್ನು ಕೇಳಿದ್ದಾರೆ.  ಈ ವೇಳೆ ನಗರ ಪೊಲೀಸ್ ಆಯುಕ್ತ ಭಾಸ್ಕರರಾವ್, ಸಂದೀಪ್ ಪಾಟೀಲ್ ಗೃಹ ಸಚಿವರ ಸಹಾಯಕ್ಕೆ ಧಾವಿಸಿದ್ದಾರೆ ವಾಸ್ತವದ ಅರಿವಾಗಿದೆ.

      ಕೂಡಲೇ ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ.ಚನ್ನಣ್ಣನವರ್ ಅವರನ್ನು ಕರೆದ ಗೃಹ ಸಚಿವರು, ಕರ್ನಾಟಕದ ಗಡಿಯೊಳಗೆ ತಮಿಳುನಾಡು ಪೊಲೀಸರು ಹೇಗೆ ಬಂದರು, ಎಂಬುದರ ಬಗ್ಗೆ ಪ್ರಶ್ನಿಸಿ, ಕೂಡಲೆ ತಮಿಳುನಾಡು ಪೊಲೀಸರನ್ನು ಹೊರಹಾಕಿ ಕರ್ನಾಟಕ ಪೊಲೀಸ್ ಸಿಬ್ಬಂದಿಯನ್ನು ಅಲ್ಲಿಗೆ ನಿಯೋಜಿಸುವಂತೆ ಸೂಚಿಸಿದ್ದಾರೆ.

      ತಮಿಳುನಾಡು ಕರ್ನಾಟಕ ರಾಜ್ಯಗಳ ಗಡಿ ಪ್ರದೇಶವಾಗಿರುವ ಅತ್ತಿಬೆಲೆಯಲ್ಲಿ ತಮಿಳುನಾಡು ಪೊಲೀಸರು ಮಫ್ತಿಯಲ್ಲಿ ವಾಹನಗಳ ತಪಾಸಣೆ ನಡೆಸ್ತಾ ಇದ್ದರು. ಅತ್ತಿಬೆಲೆ ಕರ್ನಾಟಕ ರಾಜ್ಯದ ವ್ಯಾಪ್ತಿಯೊಳಗೆ ಬರುವುದರಿಂದ ತಮಿಳುನಾಡು ಪೊಲೀಸರು ನಿಯಮ ಉಲ್ಲಂಘಿಸಿ ಈ ತಪಾಸಣೆಯನ್ನು ನಡೆಸುತ್ತಿದ್ದರು ಎನ್ನಲಾಗಿದೆ. ಆದರೆ, ಈಗ ಗೃಹ ಸಚಿವರ ಸೂಚನೆಯಿಂದ ತಮಿಳುನಾಡು ಪೊಲೀಸರು ನಮ್ಮ ಗಡಿಯಲ್ಲಿ ಬ್ಯಾರಿಕೇಡ್ ಗಳನ್ನು ತೆರವುಗೊಳಿಸಿ ಜಾಗ ಖಾಲಿ ಮಾಡಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link