ಹೊಗೆರಹಿತ ತಂಬಾಕು ನಿಷೇಧಕ್ಕೆ ಕೇಂದ್ರದ ಸೂಚನೆ..!

ಬೆಂಗಳೂರು

    ಕೊರೊನಾ ವೈರಾಣು ಸೋಂಕು ಹರಡುವುದನ್ನು ತಡೆಯಲು ಸಾರ್ವಜನಿಕರು ತಂಬಾಕು ಎಲೆ ಜಗಿದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ತಡೆಯಬೇಕು. ಈ ನಿಟ್ಟಿನಲ್ಲಿ ಹೊಗೆರಹಿತ ತಂಬಾಕು ಬಳಕೆಯನ್ನೂ ಸಹ ನಿರ್ಬಂಧಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿದೆ.

    ತಂಬಾಕು ಉತ್ಪನ್ನಗಳು, ಪಾನ್ ಮಸಾಲ ಮತ್ತು ಸುಪಾರಿ ಜಗಿಯುವುದರಿಂದ ಜೊಲ್ಲುರಸದ ಉತ್ಪಾದನೆ ಹೆಚ್ಚಾಗಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಹೆಚ್ಚಾಗುತ್ತದೆ. ಇದರಿಂದಲೂ ಕೊರೊನಾ ವೈರಾಣು ಹರಡುವ ಸಾಧ್ಯತೆಯನ್ನು ಕಡಿಮೆ ಮಾಡಬೇಕು ಎಂದು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರದ ಮೂಲಕ ಸೂಚಿಸಲಾಗಿದೆ.

    ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ ಸಾಂಕ್ರಾಮಿಕ ರೋಗಗಳ ನಿರ್ವಹಣೆ ಕಾಯ್ದೆ, ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ-1860 ಮತ್ತು ಅಪರಾಧ ನಿಯಂತ್ರಣ ಸಂಹಿತೆಯಡಿ ಈ ಕುರಿತು ಆದೇಶ ಹೊರಡಿಸಬೇಕು ಎಂದು ಸೂಚಿಸಲಾಗಿದೆ. 9ಕ್ಕೂ ಹೆಚ್ಚು ರಾಜ್ಯಗಳು ಈಗಾಗಲೇ ತಂಬಾಕು ಬಳಕೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿರ್ಬಂಧಿಸುವ ಆದೇಶವನ್ನು ಹೊರಡಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link