ಹೊನ್ನಾಳಿ ಶಾಸಕರ ವಿರುದ್ಧ ಎಐಆರ್ ದಾಖಲು !

ದಾವಣಗೆರೆ:

    ಕೊರೋನಾ ವೈರಸ್‌ ಹರಡುವವರನ್ನು ಗುಂಡಿಕ್ಕಿ ಕೊಲ್ಲಬೇಕೆಂದು ಪ್ರಚೋದನಾಕಾರಿ ಹೇಳಿಕೆ ನೀಡಿರುವ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ  ಎಂ.ಪಿ.ರೇಣುಕಾಚಾರ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‌ ಮುಖಂಡ ಎಂ.ಟಿ.ಸುಭಾಶ್ಚಂದ್ರ ಇಲ್ಲಿನ ಕೆಟಿಜೆ ನಗರ ಪೊಲೀಸ್‌ ಠಾ   ಣೆಯಲ್ಲಿ ದೂರು ದಾಖಲಿಸಿದ್ದಾರೆ.

   ಒಬ್ಬ ಶಾಸಕ ಯಾರನ್ನೇ ಆಗಲಿ ಗುಂಡಿಕ್ಕಿ ಕೊಲ್ಲು ಎಂಬುದು ನಾಗರೀಕ ಸಮಾಜದ ಲಕ್ಷಣವಲ್ಲ. ರೇಣುಕಾಚಾರ್ಯ ಹೇಳಿಕೆಯು ಸ್ಪಷ್ಟವಾಗಿ ಕಾನೂನನ್ನು ಉಲ್ಲಂಘಿಸುವ ಮತ್ತು ಪ್ರಚೋದನಾಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ರೇಣುಕಾಚಾರ್ಯಗೆ ತಕ್ಷಣ ಬಂಧಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಮುಖ್ಯಮಂತ್ರಿ, ಗೃಹ ಮಂತ್ರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಟರಿಗೆ ಎಂ.ಟಿ.ಸುಭಾಶ್ಚಂದ್ರ ಒತ್ತಾಯಿಸಿದ್ದಾರೆ.

 ಜವಾಬ್ಧಾರಿಯುತ ಸ್ಥಾನದಲ್ಲಿರುವ ರೇಣುಕಾಚಾರ್ಯ ಸಾರ್ವಜನಿಕವಾಗಿ, ಮಾಧ್ಯಮಗಳ ಮುಂದೆ ಕೊರೋನಾ ಹರಡುವವರನ್ನು ಗುಂಡಿಕ್ಕಿ ಕೊಲ್ಲಬೇಕೆಂದು ಹೇಳಿಕೆ ನೀಡಿದ್ದು, ಇಂತಹ ಪ್ರಚೋದನಾಕಾರಿ ಹೇಳಿಕೆ ನೀಡುವುದು ಐಪಿಸಿ ಸೆಕ್ಷನ್‌ 505(ಬಿ) ಉಲ್ಲಂಘನೆಯಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link