ಬೆಂಗಳೂರು:
ರಾಜ್ಯದಲ್ಲಿ ಇಂದು ಒಂದೇ ದಿನ ಮಧ್ಯಾನವರೆಗೆ 15 ಮಂದಿ ಕೋರೋನಾ ಸೋಂಕಿತರು ಪತ್ತೆಯಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 247 ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಹೊಸದಾಗಿ ಇಂದು 15 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಹುಬ್ಬಳ್ಳಿ 4, ಮಂಡ್ಯ ಹಾಗೂ ಬೆಳಗಾವಿಯಲ್ಲಿ ತಲಾ 3, ಬೀದರ್ 2, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಾಗಲಕೋಟೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ವೈರಸ್ ಸೋಂಕ ಪಾಸಿಟಿವ್ ದೃಢಪಟ್ಟಿರುವುದಾಗಿ ತಿಳಿಸಿದೆ.
ಕಳೆದ ನಿನ್ನೆ 17 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು ಪತ್ತೆಯಾಗುವ ಮೂಲಕ, ಸೋಂಕಿತರ ಸಂಖ್ಯೆ 232ಕ್ಕೆ ಏರಿಕೆಯಾಗಿತ್ತು. ಇದೀಗ ಮತ್ತೆ 15 ಮಂದಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿರುವ ಮೂಲಕ ಸೋಂಕಿತರ ಸಂಖ್ಯೆ 247ಕ್ಕೆ ಏರಿಕೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ