ಲಾಕ್ ಡೌನ್ ನಡುವೆಯೂ ರಸ್ತೆಗಿಳಿದ KSRTC ಬಸ್ಸು…!

ಬೆಂಗಳೂರು

    ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಘೋಷಣೆ ಯಾಗಿದ್ದರು ಬೆಂಗಳೂರು ನಗರದ ಸ್ವಚ್ಛತೆ ಕಾಪಾಡಲು ಪೌರ ಕಾರ್ಮಿಕರು ಕೆಲಸ ಮಾಡುತ್ತಲೇ ಇದ್ದಾರೆ. ಅಗತ್ಯ ಸೇವೆಗಳನ್ನು ಪೂರೈಕೆ ಮಾಡುವ ಜವಾಬ್ದಾರಿ ಬಿಬಿಎಂಪಿ ಮೇಲಿದೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೆಎಸ್‌ಟಿಡಿಸಿ ಮತ್ತು  ಕೆಎಸ್ಆರ್‌ಟಿಸಿ ಬಸ್‌ಗಳನ್ನು ಪೌರ ಕಾರ್ಮಿಕರ ರವಾನೆ ಮಾಡಲು ಬಳಕೆ ಮಾಡಲು ಮುಂದಾಗಿದೆ. ನಗರದಲ್ಲಿ ತುರ್ತು ಸಂದರ್ಭದಲ್ಲಿ ಮಾತ್ರ ಬಸ್‌ ಸೇವೆಯನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಹೇಳಿದೆ.

    ಬೆಂಗಳೂರು ನಗರದಲ್ಲಿ ಈಗಾಗಲೇ ಅಲ್ಲಲ್ಲಿ ಕೆಎಸ್ಆರ್‌ಟಿಸಿ ಬಸ್‌ಗಳ ಸಂಚಾರ ಆರಂಭವಾಗಿದೆ. ಆಸ್ಪತ್ರೆಗೆ ಸಾಗುವವರು ಯಾವುದೇ ವಾಹನ ಇಲ್ಲವಾದಲ್ಲಿ ಬಸ್ ಮೂಲಕ ಸಂಚಾರ ನಡೆಸಬಹುದು. ಪೌರ ಕಾರ್ಮಿಕರು ಕೆಎಸ್‌ಟಿಡಿಸಿ ಬಸ್‌ಗಳನ್ನು ಬಳಕೆ ಮಾಡಿಕೊಂಡು ವಾಪಸ್ ಮನೆಗೆ ತೆರಳುತ್ತಿದ್ದಾರೆ.

    ಯಲಹಂಕ ವಲಯದಲ್ಲಿ ಮೊದಲು ಕೆಎಸ್ಆರ್‌ಟಿಸಿ ಬಸ್‌ಗಳ ಸಂಚಾರವನ್ನು ಆರಂಭಿಸಲಾಗಿತ್ತು. ನಗರದ ಸ್ವಚ್ಛತೆಗೆ ಶ್ರಮಿಸುತ್ತಿರುವ ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆ ಬಿಬಿಎಂಪಿ ಕಾಳಜಿ ವಹಿಸಿದೆ. ಇದಕ್ಕಾಗಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ. ಎಚ್. ಅನಿಲ್ ಕುಮಾರ್ ಹೇಳಿದ್ದಾರೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link