ಬೆಂಗಳೂರು :
ರಾಜ್ಯದಲ್ಲಿ ಕೊರೊನಾ ವೈರಸ್ ಗೆ ಮತ್ತೊಂದು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ರಾಮುಲು, ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿಯೊಬ್ಬರು ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ. ಪಾರ್ಥಿವ ಶರೀರವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಅಂತ್ಯಕ್ರಿಯೆಗೆ ಇಲಾಖೆಯು ಸಿದ್ಧತೆ ನಡೆಸುತ್ತಿದೆ. ದಯಮಾಡಿ ಸಾರ್ವಜನಿಕರು ಮನೆಯಲ್ಲೇ ಸುರಕ್ಷಿತವಾಗಿರಬೇಕು ಎಂದು ವಿನಂತಿಸಿಕೊಂಡಿದ್ದಾರೆ.
ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿಯೊಬ್ಬರು #COVID19 ಸೋಂಕಿನಿಂದ ಮೃತಪಟ್ಟಿದ್ದಾರೆ. ಪಾರ್ಥಿವ ಶರೀರವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಅಂತ್ಯಕ್ರಿಯೆಗೆ ಇಲಾಖೆಯು ಸಿದ್ಧತೆ ನಡೆಸುತ್ತಿದೆ. ದಯಮಾಡಿ ಸಾರ್ವಜನಿಕರು ಮನೆಯಲ್ಲೇ ಸುರಕ್ಷಿತವಾಗಿರಬೇಕು ಎಂದು ವಿನಂತಿಸುತ್ತೇನೆ
— B Sriramulu (@sriramulubjp) April 15, 2020
ಕೊರೊನಾ ಸೋಂಕಿತ ವೃದ್ಧನನ್ನು ಬೆಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ.
ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಮಂಗಳವಾರ ಸಂಜೆಯ ವರದಿಯಂತೆ ರಾಜ್ಯದಲ್ಲಿ 26 ಸೋಂಕಿತ ಪ್ರಕರಣಗಳು ದೃಢವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ