ಪಟ್ಟಣದಲ್ಲಿ ಸ್ವಚ್ಛತೆ-ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ : ಡಾ.ಪ್ರದೀಪ್ ಕುಮಾರ್

ಗುಬ್ಬಿ

     ಕೊರೋನಾ ವೈರಾಣು ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೆ ಸರ್ಕಾರದ ನಿರ್ದೇಶನದಂತೆ ತಾಲ್ಲೂಕಿನಾದ್ಯಂತ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪಟ್ಟಣದಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಗಿದೆ. ಕುಡಿಯುವ ನೀರು ಮತ್ತು ಸ್ವಚ್ಛತೆಗೆ ವಿಶೇಷ ಗಮನಹರಿಸಲಾಗಿದ್ದು, ಪಟ್ಟಣ ಪಂಚಾಯ್ತಿ ಅಧಿಕಾರಿ ಸಿಬ್ಬಂದಿಯೊಂದಿಗೆ ಪಟ್ಟಣದ ಬಸ್ ನಿಲ್ದಾಣದ ಬಳಿಯ ಮಾಂಸ ಮಾರುಕಟ್ಟೆಯ ಪಕ್ಕದ ಚರಂಡಿಯ ತ್ಯಾಜ್ಯವನ್ನು ಸ್ವಚ್ಛಗೊಳಿಸಲಾಗಿದೆ ಎಂದು ತಹಸೀಲ್ದಾರ್ ಡಾ.ಪ್ರದೀಪ್ ಕುಮಾರ್ ಹಿರೇಮಠ್ ತಿಳಿಸಿದರು.

     ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಹೇರೂರು ಕೆರೆಯಲ್ಲಿ ನೀರು ಪಂಪ್ ಮಾಡುವ ಯಂತ್ರಗಳನ್ನು ಮತ್ತು ಪಟ್ಟಣದ ಜಲ ಶುದ್ದೀಕರಣ ಘಟಕವನ್ನು ಸಮಗ್ರವಾಗಿ ಪರಿಶೀಲನೆ ನಡೆಸಿ, ಚರಂಡಿಗಳ ಸ್ವಚ್ಛತೆ ಮತ್ತು ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ಯಾವುದೆ ಸಮಸ್ಯೆಯಾಗದಂತೆ ಸೂಕ್ತವಾದ ಕ್ರಮಗಳನ್ನು ಕೈಗೊಳ್ಳುವಂತೆ ಪಟ್ಟಣ ಪಂಚಾಯ್ತಿ ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಚಿಸಿದರು.

     ಪಟ್ಟಣ ಪಂಚಾಯ್ತಿ ಪ್ರಭಾರ ಮುಖ್ಯಾಧಿಕಾರಿ ಎಂ.ಜಯಣ್ಣ ಮಾತನಾಡಿ, ಕೊರೋನಾ ವೈರಾಣು ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪಟ್ಟಣದ ಚರಂಡಿಗಳಿಗೆ ಈಗಾಗಲೆ ಕ್ರಿಮಿನಾಶಕ ಔಷಧಿಗಳನ್ನು ಸಿಂಪಡಣೆ ಮಾಡಲಾಗಿದೆ. ಚರಂಡಿಗಳ ಸ್ವಚ್ಛತೆಗೆ ಹೆಚ್ಚಿನ ಗಮನಹರಿಸಲಾಗಿದೆ ಎಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link