ಬೆಂಗಳೂರು :
ರಾಜ್ಯದಲ್ಲಿ ಕೊರೊನಾ ವೈರಸ್ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇಂದು ಒಂದೇ ದಿನ 17 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಈ ಕುರಿತಂತೆ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಬೆಳಗ್ಗೆಯವರೆಗೆ ಮತ್ತೆ ಐವರಲ್ಲಿ ಮಾರಕ ಸೋಂಕು ದೃಢಪಟ್ಟಿದೆ. ಈ ಐದು ಪ್ರಕರಣಗಳು ಕಲಬುರಗಿ ಜಿಲ್ಲೆಯದ್ದೇ ಆಗಿದೆ. ಈ ಸೋಂಕಿತರು ಈಗಾಗಲೇ ಸೋಂಕು ಪೀಡಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರೇ ಆಗಿದ್ದಾರೆ. ಈ ಪೈಕಿ 13 ಮತ್ತು 17 ವರ್ಷದ ಇಬ್ಬರು ಬಾಲಕರು ಸೇರಿದ್ದಾರೆ. ಉಳಿದಂತೆ 19 ವರ್ಷದ ಯುವಕ, 30 ವರ್ಷದ ಯುವತಿ ಹಾಗೂ 50 ವರ್ಷದ ವ್ಯಕ್ತಿಯೋರ್ವರು ಸೇರಿದ್ದಾರೆ.
ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 5 ಹೊಸ #Covid19 ಪ್ರಕರಣಗಳು ಖಚಿತವಾಗಿದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 395ಕ್ಕೆ ಏರಿದೆ. #ಮನೆಯಲ್ಲೇಇರಿ pic.twitter.com/dpWp03a1TU
— B Sriramulu (@sriramulubjp) April 20, 2020
ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಜನತೆ ತಲ್ಲಣಗೊಂಡಿದ್ದಾರೆ. ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಿರುವುದು ಮತ್ತಷ್ಟು ಆತಂಕ ತಂದೊಡ್ಡಿದೆ. ಏತನ್ಮಧ್ಯೆ, ರಾಜ್ಯದಲ್ಲಿ ಮತ್ತೆ ಐವರಲ್ಲಿ ಕೊರೊನಾ ಸೋಂಕು ಪಾಸಿಟಿವ್ ಬಂದಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 395 ಕ್ಕೆ ಏರಿಕೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ