ಮುಂಬೈ :

ದೇಶಾದ್ಯಂತ ಜಾರಿಯಲ್ಲಿರುವ ಲಾಕ್ಡೌನ್ ಮಧ್ಯೆ ದೇಶಾದ್ಯಂತ ಇಂದಿನಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಪುನರಾರಂಭಗೊಂಡಿದೆ.
ಕೊರೊನಾ ಲಾಕ್ಡೌನ್ನಿಂದಾಗಿ ಸ್ಥಗಿತಗೊಂಡ ಆರ್ಥಿಕ ಚಟುವಟಿಕೆಗಳನ್ನು ಪುನರುಜ್ಜೀವನಗೊಳಿಸುವ ಸಲುವಾಗಿ ಭಾರತವು ಇಂದಿನಿಂದ ಕೊರೊನಾವೈರಸ್ ನಿರ್ಬಂಧಗಳನ್ನು ನಿಧಾನವಾಗಿ ಸಡಿಲಿಸುತ್ತಿರುವ ಭಾಗವಾಗಿ ಸ್ಥಗಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಇಂದಿನಿಂದ ಮತ್ತೆ ಆರಂಭವಾಗಿದೆ.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಎಲ್ಲ ಪ್ಲಾಜಾಗಳಲ್ಲಿ ಸೋಮವಾರ ಮುಂಜಾನೆಯಿಂದಲೇ ಟೋಲ್ ಸಂಗ್ರಹಣೆ ಆರಂಭಿಸಲಾಗಿದೆ ಎಂದು ಹೆದ್ದಾರಿ ಡೆವೆಲಪರ್ ಸಂಸ್ಥೆ ಐಆರ್ಬಿ ಇನ್ಫ್ರಾಸ್ಟ್ರಕ್ಚರ್ ಡೆವೆಲಪರ್ ತಿಳಿಸಿದೆ.
ಮಾರ್ಚ್ 24 ರಂದು 21 ದಿನಗಳ ರಾಷ್ಟ್ರವ್ಯಾಪಿ ಲಾಕ್ ಡೌನ್ ಘೋಷಣೆಯಾದ ನಂತರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








