ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ ಇನ್ನಿಲ್ಲ..!

ಬೆಂಗಳೂರು

      ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ ಅವರು ನಗರದಲ್ಲಿ ಶನಿವಾರ ಬೆಳಗ್ಗೆ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ.ಶುಕ್ರವಾರ ರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡ ಮಹೇಂದ್ರ ಕುಮಾರ್ ಅವರನ್ನು ಕೂಡಲೇ ಚಿಕಿತ್ಸೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಮೃತರಿಗೆ 47 ವರ್ಷ ವಯಸ್ಸಾಗಿತ್ತು.

     ಮಹೇಂದ್ರ ಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.ಭಜರಂಗದಳದ ರಾಜ್ಯ ಸಂಚಾಲಕರಾಗಿದ್ದ ಅವರು ಅದರಿಂದ ಹೊರಬಂದ ಬಳಿಕ ಸಾಮಾಜಿಕ, ಜಾಗೃತಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದರು. ಬಿಜೆಪಿ, ಸಂಘ ಪರಿವಾರದ ಸಿದ್ಧಾಂತ ವಿರೋಧಿಸಿ ಸಾಕಷ್ಟು ನಿಷ್ಠುರಗಳನ್ನೂ ಕಟ್ಟಿಕೊಂಡಿದ್ದರು. ಮೂಲತ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾದ ಮಹೇಂದ್ರ ಕುಮಾರ್ ಬೆಂಗಳೂರು ವಾಸಿಯಾಗಿದ್ದರು.

     “ನಮ್ಮ ಧ್ವನಿ” ಎಂಬ ಸಂಘಟನೆ ಸಂಸ್ಥಾಪಕರಾಗಿದ್ದ ಅವರು ನಮ್ಮ ಧ್ವನಿ ಯೂಟ್ಯೂಬ್ ಚಾನೆಲ್ ಮೂಲಕ ವಿವಿಧ ವಿಷಯಗಳ ಬಗ್ಗೆ ಮಾತನಾಡಿ ಜನಪ್ರಿಯರಾಗಿದ್ದರು. ಜನಪರ ಹೋರಾಟಗಾರ, ಶಾಂತಿಪ್ರಿಯ, ಸೌಹಾರ್ದಪರ, ಪ್ರಗತಿಪರ ನಿಲುವುಗಳ ಮಹೇಂದ್ರ ಕುಮಾರ್ ಅವರ ನಿಧನ ರಾಜ್ಯಕ್ಕೆ ಬಹು ದೊಡ್ಡ ಆಘಾತವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link