ತಾಲ್ಲೂಕಿನ ಗ್ರಾಮಗಳಿಗೆ ಕಾಂಗ್ರೆಸ್ ಟಾಸ್ಕ್ ಫೋರ್ಸ್ ಸಮಿತಿ ಭೇಟಿ..!

ಹರಪನಹಳ್ಳಿ
    ಮಹಮಾರಿ ಕೊರೋನಾ ವೈರಸ್ ಹರಡದಂತೆ ಜಾಗೃತಿ ಮೂಡಿಸಲು ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಟಾಸ್ಕ್ ಫೋರ್ಸ್ ಸಮಿತಿಯೊಂದಿಗೆ ಹಡಗಲಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ್ ತಾಲ್ಲೂಕಿನ ಕೆಲವು ಗ್ರಾಮಗಳಿಗೆ ಬೇಟಿ ನೀಡಿದರು.
   ತಾಲ್ಲೂಕಿನ ಹಿರೇಮೇಗಳಗೇರಿಯಲ್ಲಿ ಶನಿವಾರ ಬೇಟಿ ನೀಡಿದ ಅವರು, ಗ್ರಾಮದ ಬೇಡರ ಕಣ್ಣಪ್ಪ ದೇವಸ್ಥಾನ ರಸ್ತೆ ಅಗಲಿಕರಣದಿಂದ ಸ್ಥಳಾಂತರ ಹಾಗೂ ನವೀಕರಣ ಮಾಡಿ ನಿರ್ಮಿಸಲು 10 ಲಕ್ಷ ಅನುದಾನವನ್ನು ಮುಜುರಾಯಿ ಇಲಾಖೆಯ ಸಚಿವರಾಗಿದ್ದಾಗ ನೀಡಿದ್ದರು. ಪ್ರಾರಂಭವಾಗಿದ್ದ ಕಾಮಗಾರಿಯನ್ನು ಪರಿಶೀಲಿಸಿ ಗ್ರಾಮದ ಮುಖಂಡರು ಹಾಗೂ ವಾಲ್ಮೀಕಿ ಸಮಾಜದ ಮುಖಂಡರೊಂದಿಗೆ ಮಾತನಾಡಿ ಕರೋನಾ ವೈರಸ್ ಬಗ್ಗೆ ಜಾಗೃತಿಯಾಗಿರಲು ಸಲಹೆ ನೀಡಿದರು. 
    ರೈತರಿಗೆ ಹಾಗೂ ಬಡಜನರ ಸಮಸ್ಯೆಗಳಿಗೆ ಕಾಂಗ್ರೆಸ್ ಪಕ್ಷ ವೈಯಕ್ತಿಕವಾಗಿ ಸಹಾಯ ಹಸ್ತ ನೀಡುತ್ತಿದೆ. ತಾತ್ಕಾಲಿಕವಾಗಿ ದಿನಸಿ ಕಿಟ್ ನೀಡಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ ಸಾರಥ್ಯ ದೊರೆತಿದ್ದು ಪಕ್ಷ ಸಂಘಟನೆಗೆ ಕಾರ್ಯಕರ್ತರು ಸಿದ್ದರಾಗಬೇಕು. ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷ ಬಲಗೊಳ್ಳಲು ಕಾರ್ಯಕರ್ತರು ಶ್ರಮಿಸಬೇಕು ಎಂದರು.
    ಪುರಸಭೆ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಪಕ್ಷದ ಟಾಸ್ಕ್ ಸಮಿತಿಯ ಅಧ್ಯಕ್ಷ ಹೆಚ್.ಕೆ.ಹಾಲೇಶ್ ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ ಲಕ್ಕವಳ್ಳಿ ಹನುಮಂತಪ್ಪ, ದೊಡ್ಡಜ್ಜಿ ಹನುಮಂತಪ್ಪ, ಅಂಗಡಿ ಚಂದ್ರಪ್ಪ, ಬಿಸೆಟೆಪ್ಪ ಹಾಗೂ ಇತರರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link