ಬೆಂಗಳೂರು:
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೋನಾ ಸೋಂಕಿತ ವ್ಯಕ್ತಿ ಇಂದು ಬೆಳಗ್ಗೆ ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊರೋನಾ ಸೋಂಕು ತಗುಲಿದ್ದರಿಂದ ಮನನೊಂದು ಆಸ್ಪತ್ರೆಯ ಕಿಟಕಿಯಿಂದ ಜಿಗಿದು ಸಾವನ್ನಪ್ಪಿರುವ ಸಾಧ್ಯತೆಯಿದೆ.
ವಿಕ್ಟೋರಿಯಾ ಆಸ್ಪತ್ರೆಯ ಮಹಡಿ ಮೇಲಿಂದ ಬಿದ್ದು ಕೊರೋನಾ ರೋಗಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯ ಟ್ರೋಮಾ ಸೆಂಟರ್ನಲ್ಲಿ ಕ್ವಾರಂಟೈನ್ನಲ್ಲಿದ್ದ ವ್ಯಕ್ತಿ ಇಂದು ಬೆಳಗ್ಗೆ ಸಿಬ್ಬಂದಿಯ ಜೊತೆ ಚೆನ್ನಾಗಿಯೇ ಮಾತನಾಡಿಕೊಂಡಿದ್ದ. ತಿನ್ನಲು ಇಡ್ಲಿ ಬೇಕು ಎಂದು ಹೇಳಿದ್ದರಿಂದ ತಿಂಡಿ ತರಲು ಆಸ್ಪತ್ರೆಯ ಸಿಬ್ಬಂದಿ ಹೊರಗೆ ಹೋದಾಗ ಆತ ಕಿಟಕಿಯಿಂದ ಕೆಳಗೆ ಹಾರಿದ್ದಾನೆ ಎಂದು ತಿಳಿಸಿದುಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. 4 ವರ್ಷದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ. ಬೆಂಗಳೂರಿನಲ್ಲಿ ಅಣ್ಣನ ಮನೆಯಲ್ಲಿ ವಾಸವಾಗಿದ್ದ. ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಆತನಿಗೆ ಕೊರೋನಾ ಸೊಂಕು ತಗುಲಿರುವುದು ದೃಢಪಟ್ಟಿತ್ತು. ಆತನನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಆತನ ಕುಟುಂಬಸ್ಥರನ್ನು ಸಹ ಹೋಟೆಲ್ ಕ್ವಾರಂಟೈನ್ ಗೆ ಕಳುಹಿಸಲಾಗಿತ್ತು. ವಿವಿ ಪುರಂ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಯಾರನ್ನೂ ಹತ್ತಿರ ಬಿಡದೆ ಏರಿಯಾ ಬ್ಲಾಕ್ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ