ಹಾವೇರಿ :
ಕೋವಿಡ್ ಲಾಕ್ ಡೌನ್ ಜಾರಿಯಲ್ಲಿ ಇರುವುದರಿಂದ ಜಿಲ್ಲಾಡಳಿತದಿಂದ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯ ಸಭಾ ಭವನದಲ್ಲಿ ಸರಳವಾಗಿ ಆಚರಿಸಲಾಯಿತು.
ಬಸವೇಶ್ವರರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸವನಗೌಡ ದೇಸಾಯಿ ಅವರು ಮಾಲಾರ್ಪಣೆ ಮಾಡಿ ನಮಿಸಿದರು .
ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ದೇಸಾಯಿ, ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಮಲ್ಲಿಕಾಜು೯ನ ಬಾಲದಂಡಿ ,ಸಮಾಜ ಕಲ್ಯಾಣ ಇಲಾಖೆ ಉಪನಿದೇ೯ಶಕಿ ಶ್ರೀಮತಿ ಚೈತ್ರ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದೇ೯ಶಕರಾದ ಶ್ರೀಮತಿ ಶಶಿಕಲಾ ಹುಡೆದ್ ಸೇರಿದಂತೆ ಇತರ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ