ನವದೆಹಲಿ
ಲಾಕ್ ಡೌನ್ ಕಾರಣ ವಿವಿಧ ರಾಜ್ಯಗಳಲ್ಲಿ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಬಸ್ಗಳಲ್ಲಿ ಕಾರ್ಮಿಕರನ್ನು ಕಳುಹಿಸಲು ತೀರ್ಮಾನಿಸಲಾಗಿತ್ತಾದರು , ಕೆಲವು ರಾಜ್ಯಗಳು ವಿಶೇಷ ರೈಲುಗಳಿಗೆ ಬೇಡಿಕೆ ಇಟ್ಟಿದ್ದು ಇದಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ ಸುಮಾರು 400 ರೈಲುಗಳ ಓಡಾಟಕ್ಕೆ ಸಮ್ಮತಿ ಸೂಚಿಸಿದೆ ಎನ್ನಲಾಗಿದೆ.
ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯ ಕಾರ್ಮಿಕರು ಇದ್ದರೆ ರೈಲುಗಳ ಮೂಲಕ ಕಳಿಸಲು ಚಿಂತನೆ ನಡೆಸಲಾಗುತ್ತಿದೆ. ಭಾರತೀಯ ರೈಲ್ವೆ ಇದಕ್ಕಾಗಿ 400 ವಿಶೇಷ ರೈಲುಗಳನ್ನು ಓಡಿಸಲಿದ್ದು, ಯೋಜನೆ ತಯಾರಾಗುತ್ತಿದೆ.
ಲಾಕ್ ಡೌನ್ ಹಿನ್ನಲೆಯಲ್ಲಿ ಪ್ರಯಾಣಿಕ ರೈಲುಗಳ ಸಂಚಾರ ಮೇ 3ರ ತನಕ ರದ್ದಾಗಿದೆ. ಕಾರ್ಮಿಕರನ್ನು ಹೇಗೆ ವಾಪಸ್ ಕಳಿಸಬಹುದು ಎಂದು ರಾಜ್ಯಗಳು ಯೋಜನೆ ಸಿದ್ಧಪಡಿಸಿ ಇಲಾಖೆಗೆ ಸಲ್ಲಿಕೆ ಮಾಡಲಿವೆ. ಬಳಿಕ ವಿಶೇಷ ರೈಲು ಸಂಚಾರದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.ಈಗ ಸಿದ್ಧವಾಗಿರುವ ಯೋಜನೆ ಪ್ರಕಾರ ಹವಾನಿಯಂತ್ರಣ ರಹಿತ ವಿಶೇಷ ರೈಲುಗಳು ಕಾರ್ಮಿಕರನ್ನು ಕರೆದುಕೊಂಡು ಹೋಗಲಿವೆ. ಒಂದು ರೈಲಿನಲ್ಲಿ ಕೇವಲ 1000 ಜನರು ಮಾತ್ರ ಪ್ರಯಾಣ ಮಾಡಬಹುದಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುತ್ತದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








