ಬೆಂಗಳೂರು :
ಅಂತರ ರಾಜ್ಯಗಳಿಗೆ ತೆರಳುವ ವಾಹನಗಳಿಗೆ ನಾಳೆಯಿಂದ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ತಿಳಿಸಿದ್ದಾರೆ.ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು ಅಂತರ ರಾಜ್ಯಗಳಿಗೆ ತೆರಳಲು ಅವಕಾಶಕ್ಕೆ ಕೇಂದ್ರ ಸರ್ಕಾರ ಸೂಚನೆ ನೀಡಿದ್ದು ಈ ಸಂಬಂಧ ರಾಜ್ಯಕ್ಕೂ ಸುತ್ತೋಲೆಯ ಮೂಲಕ ಸೂಚನೆ ನೀಡಿದೆ ಎಂದರು.
ರಾಜ್ಯದಲ್ಲಿ ಆರ್ಥಿಕ ಸಂಪತ್ತಿನ ಕ್ರೂಢೀಕರಣ ಹಾಗೂ ಕೈಗಾರಿಕೆಗಳನ್ನು ತೆರೆಯುವ ಸಂಬಂಧ ಅನುಮತಿ ನೀಡುವ ಬಗ್ಗೆ ಚರ್ಚೆ ನಡೆಸಲಾಗಿದೆ. ಇದೇ ವೇಳೆಯಲ್ಲಿ ಕೇಂದ್ರ ಸರ್ಕಾರದಿಂದ ಕೆಲವು ಸೂಚನೆಗಳು ಬಂದಿದ್ದು ಅದರಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








